Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದ.ಕ. ಜಿಲ್ಲಾ ಕ.ಸಾ.ಪ. ಮಂಗಳೂರು ತಾಲೂಕು ಘಟಕದ ವತಿಯಿಂದ ಪರಿಷತ್ತಿನ ಸಂಸ್ಥಾಪನ ದಿನಾಚರಣೆ
    Literature

    ದ.ಕ. ಜಿಲ್ಲಾ ಕ.ಸಾ.ಪ. ಮಂಗಳೂರು ತಾಲೂಕು ಘಟಕದ ವತಿಯಿಂದ ಪರಿಷತ್ತಿನ ಸಂಸ್ಥಾಪನ ದಿನಾಚರಣೆ

    May 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದ.ಕ. ಜಿಲ್ಲಾ ಕ.ಸಾ.ಪ. ಮಂಗಳೂರು ತಾಲೂಕು ಘಟಕದ ವತಿಯಿಂದ ಪರಿಷತ್ತಿನ ಸಂಸ್ಥಾಪನ ದಿನಾಚರಣಾ ಕಾರ್ಯಕ್ರಮವು ದಿನಾಂಕ 05-05-2024ರ ರವಿವಾರದಂದು ಮಂಗಳೂರಿನ ನಂತೂರಿನಲ್ಲಿರುವ ಶ್ರೀ ಭಾರತೀ ಕಾಲೇಜು ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೆನರಾ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಉಪನ್ಯಾಸಕಿಯಾದ ಶೈಲಜಾ ಪುದುಕೋಳಿ “ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಶಾಲೆ ಕಾಲೇಜುಗಳಲ್ಲಿ ಆಚರಿಸುವಂತಾಗಬೇಕು. ಈ ಮೂಲಕ ಇಂದಿನ ಯುವ ಜನತೆಯಲ್ಲಿ ಕನ್ನಡದ ಅಭಿಮಾನ ಮತ್ತು ಮಮತೆ ತುಂಬಬೇಕು. ಅದ್ಭುತವಾದ ಸಮಾಜಮುಖಿ ಕಾರ್ಯಗಳನ್ನು ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ದೇವ ದೂತರಂತೆ ಕಂಡುಬರುತ್ತಾರೆ. ಅವರ ಆಶಯದಂತೆ ಇಂದಿಗೂ ಪರಿಷತ್ತು ಕನ್ನಡದ ಧ್ವನಿಯಾಗಿ ಹತ್ತು ಹಲವು ಮಹತ್ತರ ಕಾರ್ಯಗಳನ್ನೆಸಗುತ್ತಾ ಮುಂದುವರಿಯುತ್ತಿರುವುದು ಹೆಮ್ಮೆಯ ವಿಚಾರ. ಶಾಲೆ ಹಾಗೂ ಕಾಲೇಜುಗಳಲ್ಲಿ ಕಾರ್ಯಕ್ರಮ ಮಾಡುವಲ್ಲಿ ಉತ್ಸಾಹ ತೋರುತ್ತಿರುವ ಮಂಗಳೂರು ತಾಲೂಕು ಘಟಕ ಅಭಿನಂದನಾರ್ಹ. ಕ.ಸಾ.ಪ. ಕನ್ನಡಿಗರ ಏಕತೆಯ ಸಂಕೇತ.” ಎಂದು ತಿಳಿಸಿದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾಡೋಜ ಕಯ್ಯಾರರ ಪುತ್ರ, ನಿವೃತ್ತ ಪ್ರಾಧ್ಯಾಪಕ ಡಾ. ಪ್ರಸನ್ನ ರೈ ಕಲ್ಲಕಳಿಯ ಮಾತನಾಡಿ “ಕಯ್ಯಾರರ ಸಾಹಿತ್ಯದ ಹಾದಿಯಲ್ಲಿ ಅವರ ಜತೆಯಾಗಿ ಸಾಗಿಬರಲು ಸಿಕ್ಕ ಅವಕಾಶ ತಮಗೊದಗಿ ಬಂದ ಭಾಗ್ಯ.” ಎಂದು ನೆನಪಿಸಿಕೊಂಡರು. ಕ.ಸಾ.ಪ. ಕೇಂದ್ರ ಮಾರ್ಗದರ್ಶಕ ಸಮಿತಿ ಸದಸ್ಯ ಡಾ. ಮುರಲೀಮೋಹನ್ ಚೂಂತಾರು ಮಾತನಾಡಿ “ಕಸಾಪ ಸಂಸ್ಥಾಪನೆಯ ಸ್ಪೂರ್ತಿ ನಮ್ಮೆಲ್ಲರಲ್ಲಿ ಚಿರಸ್ಥಾಯಿ.” ಎಂದು ತಿಳಿಸಿದರು.

    ಘಟಕದ ಅಧ್ಯಕ್ಷ ಡಾ. ಮಂಜುನಾಥ ಎಸ್. ರೇವಣ್ಕರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀಮತಿ ರತ್ನಾವತಿ ಜೆ. ಬೈಕಾಡಿ ಕನ್ನಡ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅರುಣಾ ನಾಗರಾಜ್, ಸನತ್ ಕುಮಾರ್ ಜೈನ್, ಕಾವೀ ಕೃಷ್ಣದಾಸ್, ಗುರು ಪ್ರಸಾದ್, ಸತ್ಯವತಿ ಭಟ್ ಕೊಳಚಪ್ಪು, ಡಾ. ಸುರೇಶ ನೆಗಳಗುಳಿ, ಮಹಾಲಿಂಗ ಪಾಟಾಳಿ, ದಯಾನಂದ ರಾವ್ ಕಾವೂರು, ಎಂ.ಟಿ. ಭಟ್, ರಘ ಇಡ್ಕಿದು ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಎನ್. ಗಣೇಶ್ ಪ್ರಸಾದ್ ಜೀ ಸ್ವಾಗತಿಸಿ, ಗೌರವ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉದ್ಯಾವರ ಮಾಡದಲ್ಲಿ ಆಯೋಜಿಸಿದ ‘ಹರಿಕಥಾ ಸಪ್ತಾಹ’ದ ಉದ್ಘಾಟನೆ
    Next Article ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರ ‘ಅರ್ಧಸತ್ಯದ ಬೆಳಕು’ : ವ್ಯಷ್ಟಿಯಿಂದ ಸಮಷ್ಟಿಯೆಡೆಗೆ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ | ಮೇ 31

    May 27, 2025

    ಕೂಡ್ಲಿ ಗುರುರಾಜ್‌ ಗೆ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’

    May 27, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 16 ‘ನಾಟ್ಯ ಮೋಹನ ನವತ್ಯುತ್ಸಹ’ | ಮೇ 28

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.