Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ
    Drama

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 26, 2026Updated:February 28, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮವು ದಿನಾಂಕ 25 ಫೆಬ್ರವರಿ 2026ರಂದು ನಡೆಯಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ “ತಪ್ಪು ಯಾವುದು, ಸರಿ ಯಾವುದು ಎಂದು ತಿಳಿಸಿಕೊಡುವ ನಾಟಕಗಳು ಸಮಾಜವನ್ನು ಸದಾ ಎಚ್ಚರಿಸುತ್ತಿರುತ್ತವೆ. ಸರಿದಾರಿಯಲ್ಲಿ ನಡೆಯಲು ಬೆಳಕು ತೋರುತ್ತವೆ. ಯಾವುದೇ ಸಂಘಟನೆಯು ಅದರ ಸದಸ್ಯರ ಒಗ್ಗಟ್ಟಿನ ಆಧಾರದಲ್ಲಿ ಮುಂದುವರಿದು ಬೆಳೆಯುತ್ತದೆ. ಒಗ್ಗಟ್ಟಿಲ್ಲದೇ ಹೋದರೆ ಬೆಳೆಯಲು ಸಾಧ್ಯವಿಲ್ಲ. ಸಂಘಟನೆ ಮಾಡುವುದು ಯಾವಾಗಲೂ ಕಷ್ಟದ ವಿಚಾರ. ಶ್ರಮವಹಿಸುವ ಸದಸ್ಯರು ಇರಬೇಕು. ಹಣ ಬೇಕು. ಪ್ರೇಕ್ಷಕರ ಪ್ರೋತ್ಸಾಹವೂ ಇರಬೇಕು. ಆಗ ಮಾತ್ರ ಸಂಘ ಸಂಸ್ಥೆಗಳು ಯಶಸ್ವಿಯಾಗಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

    ರಂಗಸಾಧಕ ಗೌರವ ಸ್ವೀಕರಿಸಿದ ಯಕ್ಷಗುರು ನಿತ್ಯಾನಂದ ಶೆಟ್ಟಿಗಾರ್ ಮಾತನಾಡಿ, “ತುಳುಕೂಟದವರು ನಡೆಸುವ ತುಳು ನಾಟಕ ಸ್ಪರ್ಧೆಯಿಂದಾಗಿ ಅನೇಕ ತಂಡಗಳು ಉಳಿದು ಬೆಳೆದಿವೆ. ತುಳುನಾಡಿನಲ್ಲಿರುವ ಕಲೆ ಬೇರೆಲ್ಲೂ ಸಿಗುವುದಿಲ್ಲ. ಅಭಿಮಾನಿಗಳ ಪ್ರೋತ್ಸಾಹದಿಂದ ಕಲಾವಿದರು ಬೆಳೆದಿದ್ದಾರೆ” ಎಂದು ಹೇಳಿದರು.

    ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಮಾತನಾಡಿ, “ನಾಟಕ ಅಂದರೆ ಮನರಂಜನೆ ಮಾತ್ರವಲ್ಲ, ನಮ್ಮ ಬದುಕಿನ ಆಗುಹೋಗುಗಳನ್ನು ದುಃಖ ದುಮ್ಮಾನಗಳನ್ನು, ಸುಖ ಕಷ್ಟಗಳನ್ನು, ಪ್ರೀತಿ ವಿರಹಗಳನ್ನು ಬಿಂಬಿಸುವ ವೇದಿಕೆ. ಸಿನಿಮಾ ತಾರೆಯರಿಗಿಂತ ನಾಟಕ ಕಲಾವಿದರ ಶ್ರಮ ಅಪಾರವಾದುದು. ನಾಟಕ ಕಲೆ ಶ್ರೇಷ್ಠ ಕಲೆ. ಯುವಜನರು ಇದರಲ್ಲಿ ಇನ್ನಷ್ಟು ತೊಡಗಿಸಿಕೊಳ್ಳಬೇಕು” ಎಂದು ಹೇಳಿದರು.

    ನಗರಸಭೆಯ ಮಾಜಿ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಮಾತನಾಡಿ, “ಸ್ವತಃ ರಂಗಕಲಾವಿದರಾಗಿರುವ ಸುಮನಸಾದವರು ಬೇರೆ ಕಲಾವಿದರನ್ನು ಗುರುತಿಸಿ ಗೌರವಿಸುತ್ತಿರುವುದು ಸ್ತುತ್ಯರ್ಹ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಲಿ” ಎಂದು ಹಾರೈಸಿದರು.

    ಡೆಂಟಾಕೇರ್ ಉಡುಪಿಯ ಡಾ. ವಿಜಯೇಂದ್ರ ಮಾತನಾಡಿ, “ಮೊಬೈಲ್, ಡಿಜಿಟಲ್, ಆನ್ಲೈ್ನ್ ಯುಗದಲ್ಲಿ ಕಲೆ, ಕಲಾವಿದನ ಅಂತ್ಯ ಆಗಿದೆಯಾ ಎಂಬ ಪ್ರಶ್ನೆ ಬಂದಾಗ ಸುಮನಸಾ ಸಂಘಟನೆಯು ಇಲ್ಲ ಎಂಬುದನ್ನು ಸಾಬೀತು ಮಾಡುತ್ತಾ ಬಂದಿದೆ. ಕಲೆಯೊಳಗೆ ಪ್ರಕೃತಿ, ಸಂಸ್ಕೃತಿ, ವಿಕೃತಿ ಇರುತ್ತದೆ. ಸ್ವರ್ಗಕ್ಕೂ ಮಿಗಿಲಾದ ಅನುಭವ ನೀಡುತ್ತಾ ಬಂದಿರುವ ಸುಮನಸಾ ಕಲಾವಿದರು ಪ್ರಕೃತಿ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆರೋಗ್ಯ ಅಂದರೆ ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕವಾಗಿ ಸರಿ ಇರಬೇಕು. ಈ ಇವೆಲ್ಲವೂ ಆರೋಗ್ಯವಾಗಿರಬೇಕಿದ್ದರೆ ರಂಗಭೂಮಿ ಅಗತ್ಯ ಎಂದು ಅಭಿಪ್ರಾಯಪಟ್ಟರು. ದೈಹಿಕ ಆರೋಗ್ಯಕ್ಕೆ ಔಷಧ ದಿನದ 24 ಗಂಟೆ ಸಿಗಬಹುದು. ಆದರೆ, ಮಾನಸಿಕ ಆರೋಗ್ಯಕ್ಕೆ ಬೇಕಾದ ನಾಟಕಗಳು ಯಾವಾಗಲು ಸಿಗುವುದಿಲ್ಲ. ಪ್ರದರ್ಶನ ಇರುವಾಗ ವೀಕ್ಷಿಸಬೇಕು” ಎಂದು ಸಲಹೆ ನೀಡಿದರು.

    ಸೌಹಾರ್ದ ಸಂಘ ನಿಯಮಿತದ ಅಧ್ಯಕ್ಷ ಬಿ.ಜಿ. ಸುಬ್ಬರಾವ್, ಮಲ್ಪೆ ಮತ್ಶ್ಯರಾಜ್ ಗ್ರೂಪ್ನ್ ಅಭಿನಂದನ್ ಕೆ. ಕೋಟ್ಯಾನ್, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಉಪಸ್ಥಿತರಿದ್ದರು. ವಿದ್ದು ಉಚ್ಚಿಲ್ ಸ್ವಾಗತಿಸಿ, ರಾಗಿಣಿ ಹರೀಶ್ ವಂದಿಸಿ, ಕಾರ್ತಿಕ್ ಪ್ರಭು, ಸೌಭಾಗ್ಯ ತಂತ್ರಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸುಮನಸಾ ಕೊಡವೂರು ತಂಡದ ಸದಸ್ಯರಿಂದ ನರಸಿಂಹ ತುಂಗ ಇವರ ನಿರ್ದೇಶನದಲ್ಲಿ ‘ಮೈಂದ ದ್ವಿವಿದ ಕಾಳಗ’ ಕನ್ನಡ ಯಕ್ಷನಾಟಕ ಪ್ರಸ್ತುತಗೊಂಡಿತು.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಪೌರಾಣಿಕ ಕಥೆಗಳಲ್ಲಿ ಆಸಕ್ತಿ ಮೂಡಿಸುವ ‘ಕಿರಿಯರ ಸಚಿತ್ರ ರಾಮಾಯಣ’
    Next Article ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ವಿಚಾರಗೋಷ್ಠಿ
    roovari

    Add Comment Cancel Reply


    Related Posts

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಕಾಜಾಣ ನಾಟಕೋತ್ಸವ’ 2026 | ಏಪ್ರಿಲ್ 30

    April 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.