ಕಾಸರಗೋಡು : ಬಿ. ಶಿವಕುಮಾರ್ ಸಾರಥ್ಯದ ಸ್ವರ್ಣಭೂಮಿ ಫೌಂಡೇಷನ್ ಅರಳೇಪೇಟೆ ಕೋಲಾರ ಮತ್ತು ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ಸಾರಥ್ಯದ ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಹಾಗೂ ಗ್ರಂಥಾಲಯ (ರಿ.) ಇವುಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಗಡಿನಾಡು ಕನ್ನಡ ರಾಜ್ಯೋತ್ಸವ ಸಂಭ್ರಮ -2025’ವನ್ನು ದಿನಾಂಕ 15 ನವೆಂಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ಕಾಸರಗೋಡಿನ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಭವನ ರಜತ ಮಹೋತ್ಸವದ ನವೀಕರಣ ವೇದಿಕೆ ಉದ್ಘಾಟನೆ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಮತ್ತು ಸ್ವರ್ಣಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ.

