ಮೈಸೂರು : ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ (ರಿ.) ಅರ್ಪಿಸುವ ‘ಗಾನ ವೈಭವ’ ಸುಮಧುರ ಗೀತೆಗಳ ಗಾಯನ ಕಾರ್ಯಕ್ರಮವನ್ನು ದಿನಾಂಕ 24 ಜುಲೈ 2026ರಂದು ಸಂಜೆ 6-00 ಗಂಟೆಗೆ ಮೈಸೂರು ಜೆ.ಎಲ್.ಬಿ. ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದ ಸಂಗೀತ ಕಲಾನಿಧಿ ಮೈಸೂರು ವಾಸುದೇವಾಚಾರ್ಯ ಭವನದಲ್ಲಿ ಆಯೋಜಿಸಲಾಗಿದೆ.
ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಇದರ ಸಂಸ್ಥಾಪಕರಾದ ಶ್ರೀಮತಿ ಎಚ್.ಆರ್. ಲೀಲಾವತಿ ಇವರು ಅಧ್ಯಕ್ಷತೆ ವಹಿಸಲಿದ್ದು, ಟ್ರಸ್ಟಿನ ಗೌರವಾಧ್ಯಕ್ಷರಾದ ಟಿ.ಆರ್. ಹರೀಶ್ ಮತ್ತು ಅಧ್ಯಕ್ಷರಾದ ಕೆ. ನಾಗರಾಜ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸುಪ್ರಸಿದ್ಧ ಸುಗಮ ಸಂಗೀತ ಕಲಾವಿದರಾದ ಶಂಕರ್ ಶ್ಯಾನಬೋಗ್ ಇವರು ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದು, ಷಣ್ಮುಖ ಸಜ್ಜ ಇವರು ಕೀಬೋರ್ಡ್, ಆತ್ಮಾರಾಂ ನಾಯಕ ಇವರು ತಬಲ ಮತ್ತು ವಿನಯ್ ರಂಗದೋಳ್ ಇವರು ರಿದಂ ಪ್ಯಾಡ್ ನಲ್ಲಿ ಸಹಕರಿಸಲಿದ್ದಾರೆ.

