05 ಏಪ್ರಿಲ್ 2023, ಕೊಡಗು: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.
2022-23ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ :94483 46276. ಇಲ್ಲಿಗೆ ದಿನಾಂಕ 20.04.2023ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.