ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 6 ಸೆಪ್ಟೆಂಬರ್ 2024ರಂದು ಸಂಜೆ 4-30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.
ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪದಶ್ರೀ ಹರೇಕಳ ಹಾಜಬ್ಬ ‘ಗೌರವ ಪ್ರಶಸ್ತಿ’ ಪ್ರದಾನ ಮಾಡಲಿದ್ದಾರೆ. 2022ನೇ ಸಾಲಿನ ‘ಗೌರವ ಪ್ರಶಸ್ತಿ’ಯನ್ನು ಹಂಝತುಲ್ಲಾ ವೈ ಕುವೇಂಡ ಬೆಂಗಳೂರು, ಮರಿಯಮ್ ಇಸ್ಮಾಈಲ್ ಉಳ್ಳಾಲ, ಎಂ.ಜಿ. ಶಾಹುಲ್ ಹಮೀದ್ ಗುರುಪುರ ಹಾಗೂ 2023ನೇ ಸಾಲಿನ ‘ಗೌರವ ಪ್ರಶಸ್ತಿ’ಯನ್ನು ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ, ಮುಹಮ್ಮದ್ ಶರೀಫ್ ನಿರ್ಮುಂಜೆ, ಅಶ್ರಫ್ ಅಪೋಲೊ ಕಲ್ಲಡ್ಕ ಸ್ವೀಕರಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಬೆಲ್ಕಿರಿ ದ್ವೈಮಾಸಿಕ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದು, ಬಂಟ್ವಾಳ ಮೂಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಹೆಚ್. ಅಧ್ಯಕ್ಷತೆ ವಹಿಸಲಿದ್ದು, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಟ್ಯಾನಿ ಜೋಕಿಂ ಅಲ್ವಾರಿಸ್, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸದಾನಂದ ಮಾವಜಿ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷರದ ಎಂ.ಬಿ. ಅಬ್ದುಲ್ ರಹ್ಮಾನ್, ರಹೀಮ್ ಉಚ್ಚಿಲ್, ಬಿ.ಎ. ಮುಹಮ್ಮದ್ ಹನೀಫ್, ಕರಂಬಾರ್ ಮಹಮ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಇದರ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಿ.ಎಂ. ಅಸ್ಲಮ್, ಚಿಕ್ಕಮಗಳೂರು ಜಿಲ್ಲಾ ಬ್ಯಾರಿ ಒಕ್ಕೂಟದ ಅಧ್ಯಕ್ಷ ಟಿ.ಎಂ. ನಾಸಿರ್, ಮೈಸೂರಿನ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಯು.ಕೆ. ಹಮೀದ್ ಹಾಜಿ, ಅಖಿಲ ಭಾರತ ಬ್ಯಾರಿ ಮಹಾಸಭಾದ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಗೌರವಾಧ್ಯಕ್ಷ ಯೂಸುಫ್ ವಖ್ತಾರ್, ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞ ಪಾರೆ, ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಮುನೀರ್ ಅಹ್ಮದ್ ಎಸ್.ಐ., ಕರಾವಳಿ ಬ್ಯಾರಿ ಕಲಾವಿದರ ಒಕ್ಕೂಟದ ಅಧ್ಯಕ್ಷ ಹುಸೈನ್ ಕಾಟಿಪಳ್ಳ, ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ರಶೀದ್ ನಂದಾವರ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ‘ಬಡ್ಡೂರು’ ಬಳಗದಿಂದ ವಿನೂತನ ಪ್ರಹಸನ ‘ಮೂರ್ತಿಗಳು’ ಹಾಗೂ ಎಂ.ಜಿ.ಎಂ. ತಾಲೀಮು ಸ್ಪೋರ್ಟ್ಸ್ ಗುರುಪುರ ಇವರಿಂದ ತಾಲೀಮು ಪ್ರದರ್ಶನ ನಡೆಯಲಿದೆ ಎಂದು ಅಕಾಡಮಿಯ ರಿಜಿಸ್ಟ್ರಾರ್ ರಾಜೇಶ್ ಜಿ. ತಿಳಿಸಿದ್ದಾರೆ.