ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ ಮಾಲೆ – 6ರಲ್ಲಿ ಡಾ. ಚಂದ್ರಶೇಖರ ಕಂಬಾರ ಇವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 29 ಆಗಸ್ಟ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಉಪನ್ಯಾಸ ಮಾಲೆಯಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರಾದ ಮಹಾಬಲ ಗೌಡ ಇವರು ಉಪನ್ಯಾಸ ನೀಡಲಿದ್ದಾರೆ. ಮುಂಡಾಜೆ ಶತಾಬ್ಧಿ ವಿದ್ಯಾಲಯ ಸಮಿತಿ ಸಂಚಾಲಕರಾದ ನಾರಾಯಣ ಫಡ್ಕೆ ಮತ್ತು ಮುಂಡಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.