ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಅನುಗ್ರಹ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸಮಾಲೆ – 8ರಲ್ಲಿ ಗಿರೀಶ್ ಕಾರ್ನಾಡ್ ಇವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 09 ಸೆಪ್ಟೆಂಬರ್ 2025ರಂದು ಬೆಳಗ್ಗೆ 11-00 ಗಂಟೆಗೆ ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಉಪನ್ಯಾಸ ಮಾಲೆಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಕನ್ನಡ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಭವ್ಯಶ್ರೀ ಆರ್. ಬಲ್ಲಾಳ್ ಇವರು ಉಪನ್ಯಾಸ ನೀಡಲಿದ್ದಾರೆ. ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.