Subscribe to Updates

    Get the latest creative news from FooBar about art, design and business.

    What's Hot

    ‘ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ’ ಪ್ರಶಸ್ತಿಗೆ ಎಲ್. ಗಿರಿಜಾ ರಾಜ್ ಆಯ್ಕೆ

    September 12, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಅವತರಣ’ ನಾಟ್ಯದ ಕಥೆ | ಸೆಪ್ಟೆಂಬರ್ 14   

    September 12, 2025

    ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ | ಕೊನೆಯ ದಿನಾಂಕ ಸೆಪ್ಟೆಂಬರ್ 17

    September 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ | ಕೊನೆಯ ದಿನಾಂಕ ಸೆಪ್ಟೆಂಬರ್ 17
    Literature

    ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ | ಕೊನೆಯ ದಿನಾಂಕ ಸೆಪ್ಟೆಂಬರ್ 17

    September 12, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಬಹುಭಾಷಾ ಕವಿಗೋಷ್ಠಿಯು ದಿನಾಂಕ 26 ಸೆಪ್ಟೆಂಬರ್ 2026ರ ಶುಕ್ರವಾರ ಬೆಳಿಗ್ಗೆ 10-00 ಗಂಟೆಗೆ ಗೋಣಿಕೊಪ್ಪಲು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುವ ಶ್ರೀ ಕಾವೇರಿ ದಸರಾ ಕಲಾ ವೇದಿಕೆಯಲ್ಲಿ ಆಯೋಜಿಸಲಾಗಿದೆ.

    ಗೋಣಿಕೊಪ್ಪಲು ಬಹುಭಾಷಾ ಕವಿಗೋಷ್ಠಿ ಆಯೋಜನ ಸಮಿತಿಯ ಅಧ್ಯಕ್ಷರಾಗಿರುವ ಕೋಳೆರ ದಯಾ ಚಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಂಚಾಲಕರಾಗಿ ಶ್ರೀಮತಿ ಎಸ್.ಎಂ, ರಜನಿ, ಕಾರ್ಯದರ್ಶಿಯಾಗಿ ಶ್ರೀಮತಿ ಶೀಲಾ ಬೋಪಣ್ಣ, ಸಹಕಾರ್ಯದರ್ಶಿಯಾಗಿ ಟಿ.ಅರ್. ವಿನೋದ್, ನಿರ್ದೇಶಕರಾಗಿ ಶ್ರೀಮತಿ ಚಂದನಾ ಮಂಜುನಾಥ್, ಶ್ರೀಮತಿ ಓಮನ, ಶ್ರೀಮತಿ ಉಳುವಂಗಡ ಕಾವೇರಿ, ಜಗದೀಶ್ ಜೋಡುಬೀಟಿ, ಕೆ.ವಿ. ರಾಮಕೃಷ್ಣ, ಶ್ರೀ ಕಾವೇರಿ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸಂಯೋಜಕ ಎಂ.ಕೆ. ಚಂದನ್ ಕಾಮತ್, ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಇವರನ್ನು ಆರಿಸಲಾಯಿತು.

    ಸಭೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ದಿಲ್ಲನ್ ಚಂಗಪ್ಪ, ಶ್ರೀ ಕಾವೇರಿ ದಸರಾ ಸಮಿತಿಯ ಉಪಾಧ್ಯಕ್ಷರಾದ ಶಿವಾಜಿ ಉಪಸ್ಥಿತರಿದ್ದರು. ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ/ಕವಿಯಿತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ಕವಿಯಿತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ದಿನಾಂಕ 17 ಸೆಪ್ಟೆಂಬರ್ 2025ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ.

    ಈ ಬಾರಿಯ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಬೆಟ್ಟಕುರುಬ, ಜೇನುಕುರುಬ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು ಕನ್ನಡ ಲಿಪಿಯಲ್ಲಿ ಹಾಗೂ ಹಿಂದಿ, ಇಂಗ್ಲೀಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು. ವಿಶೇಷವಾಗಿ ಮಕ್ಕಳ ಕವನ (6ರಿಂದ 13 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ.

    ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ಈ ಕೆಳಗೆ ಸೂಚಿಸಿದ ವ್ಯಾಟ್ಸಾಪ್, ಇ-ಮೇಲ್ ಮೂಲಕ ಕಳುಹಿಸಬಹುದು. ಕವನಗಳನ್ನು ಟೈಪ್ ಮಾಡಿ ಕಳುಹಿಸಬೇಕು. ವಾಟ್ಸಾಪ್ ಅಥವಾ ಇಮೇಲ್ ನಲ್ಲಿ ಕವನದ ಛಾಯ ಪ್ರತಿಯನ್ನು ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ.

    ವಾಟ್ಸಾಪ್ ಅಥವಾ ಇಮೇಲ್ ಸೌಲಭ್ಯ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು. ವಿಳಾಸ : ಅಧ್ಯಕ್ಷರು, ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ, ಕೇರಾಫ್ ಕಾಮತ್ ನವಮಿ, ಗೋಣಿಕೊಪ್ಪಲು.-571213. (ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು).

    ಕವನಗಳ ನಿಬಂಧನೆಗಳು : ಯಾವುದೇ ಭಾಷೆಯಲ್ಲಿ ಸ್ವರಚಿತ, ಸಾಮಾಜಿಕ ಜಾಲ ತಾಣ ಸೇರಿದಂತೆ ಎಲ್ಲಿಯೂ ಪ್ರಕಟವಾಗದ ಕವನಗಳನ್ನು ಮಾತ್ರ ಕಳುಹಿಸಬೇಕು. ಕವನಗಳು ಗರಿಷ್ಠ 16 ಸಾಲುಗಳನ್ನು ಮೀರಬಾರದು. ಯಾವುದೇ ಭಾಷೆಯ ಒಂದು ಕವನವನ್ನು ಮಾತ್ರ ಆಯ್ಕೆಗೆ ಕಳುಹಿಸಬೇಕು. ಎರಡೆರಡು ಭಾಷೆಗಳಲ್ಲಿ ಒಬ್ಬರೇ ಕವನಗಳನ್ನು ಕಳುಹಿಸಿದಲ್ಲಿ ಅವರ ಎಲ್ಲಾ ಕವನಗಳನ್ನು ತಿರಸ್ಕರಿಸಲಾಗುತ್ತದೆ.

    ಹೆಚ್ಚಿನ ಮಾಹಿತಿಗೆ ಸಮಿತಿಯ ಸಂಚಾಲಕಿ ಶ್ರೀಮತಿ ಎಸ್.ಎಂ. ರಜನಿ -94838 26120.
    ಕಾರ್ಯದರ್ಶಿ ಶ್ರೀಮತಿ ಶೀಲಾ ಬೋಪಣ್ಣ- 9945794414
    ಸದಸ್ಯರಾದ ಶ್ರೀಮತಿ ಚಂದನಾ ಮಂಜುನಾಥ್ – 9986939357 ಇವರುಗಳನ್ನು ಸಂಪರ್ಕಿಸಬಹುದು.
    ಇ-ಮೇಲ್ [email protected]

    ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷಾ ಕವಿಗೋಷ್ಠಿಯಂದು ಅವಕಾಶ ಒದಗಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಆಯ್ಕೆಯಾದ ಕವನವನ್ನಷ್ಟೆ ವಾಚಿಸಬೇಕು. ಕವನಗಳನ್ನು ಹಾಡುವಂತಿಲ್ಲ ಮತ್ತು ಯಾವುದೇ ಪೀಠಿಕೆಗಳಿಗೆ ಅವಕಾಶವಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ತಿಳಿಸಿದ್ದಾರೆ.

    baikady Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleವಿಮರ್ಶೆ | ರಾಗಂ ತಾನಂ ಪಲ್ಲವಿಯೊಂದಿಗೆ ಪ್ರಬುದ್ಧ ಕಛೇರಿ ನೀಡಿದ ಭಾರಧ್ವಾಜ್ ಸುಬ್ರಹ್ಮಣ್ಯಂ
    Next Article ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಅವತರಣ’ ನಾಟ್ಯದ ಕಥೆ | ಸೆಪ್ಟೆಂಬರ್ 14   
    roovari

    Add Comment Cancel Reply


    Related Posts

    ‘ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ’ ಪ್ರಶಸ್ತಿಗೆ ಎಲ್. ಗಿರಿಜಾ ರಾಜ್ ಆಯ್ಕೆ

    September 12, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಅವತರಣ’ ನಾಟ್ಯದ ಕಥೆ | ಸೆಪ್ಟೆಂಬರ್ 14   

    September 12, 2025

    ವಿಮರ್ಶೆ | ರಾಗಂ ತಾನಂ ಪಲ್ಲವಿಯೊಂದಿಗೆ ಪ್ರಬುದ್ಧ ಕಛೇರಿ ನೀಡಿದ ಭಾರಧ್ವಾಜ್ ಸುಬ್ರಹ್ಮಣ್ಯಂ

    September 12, 2025

    ಉದ್ಘಾಟನೆಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಹೈದರಬಾದ್ ಘಟಕ

    September 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.