ಪುತ್ತೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ – 2024’ ಸರಣಿಯ 18ನೇ ಕಾರ್ಯಕ್ರಮವು ದಿನಾಂಕ 30 ನವೆಂಬರ್ 2024ರ ಶನಿವಾರದಂದು ಸರಕಾರಿ ಪ್ರೌಢಶಾಲೆ ಪಾಪೆಮಜಲು ಇಲ್ಲಿನ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ನಡೆಯಲಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಅರಿಯಡ್ಕ ಹಾಗೂ ಸರಕಾರಿ ಪ್ರೌಢಶಾಲೆ ಪಾಪೆಮಜಲು ಇದರ ಸಹಕಾರದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಪೋಷಕತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

