ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘವು ಆಯೋಜಿಸುವ 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನ 22 ಮತ್ತು 23 ಮಾರ್ಚ್ 205 ರಂದು ನಡೆಯಲಿದ್ದು, ಲೇಖಕಿ ಎಚ್.ಎಸ್. ಶ್ರೀಮತಿ ಇವರು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ‘ಹಿಂದಣ ಹೆಜ್ಜೆ, ಮುಂದಣ ನೋಟ’ ಎಂಬ ಶೀರ್ಷಿಕೆಯಡಿ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಭಾಗವಹಿಸಿ, ಸಮಾರೋಪ ನುಡಿಗಳನ್ನಾಡಲಿದ್ದಾರೆ.
ಎರಡು ದಿನಗಳ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು, ಕವಿಗೋಷ್ಠಿಗಳು ನಡೆಯಲಿದ್ದು, ರಾಜ್ಯದ ವಿವಿಧೆಡೆ ಇರುವ ಲೇಖಕಿಯರು, ಕವಯಿತ್ರಿಯರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ತಿಳಿಸಿದ್ದಾರೆ.