ವಿಜಯನಗರ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್, ಸಾಹಿತಿ ಕುಂ. ವೀರಭದ್ರಪ್ಪ ಹಾಗೂ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಇವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ‘ನಾಡೋಜ’ ಗೌರವ ಪದವಿಗೆ ಆಯ್ಕೆಮಾಡಲಾಗಿದೆ.
ದಿನಾಂಕ 04 ಏಪ್ರಿಲ್ 2025ರ ಸಂಜೆ ನಡೆಯುವ 33ನೇ ‘ನುಡಿಹಬ್ಬ’ದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ನಾಡೋಜ ಪದವಿ ಪ್ರದಾನ ಮಾಡಲಿದ್ದಾರೆ. 198 ವಿದ್ಯಾರ್ಥಿಗಳಿಗೆ ಪಿ. ಎಚ್. ಡಿ. ಪದವಿ ಪ್ರದಾನ ಮಾಡಲಿದ್ದಾರೆ. ತುಮಕೂರು ವಿ. ವಿ. ವಿಶ್ರಾಂತ ಕುಲಪತಿ ಪ್ರೊ. ರಾಜಾಸಾಬ್ ಎ. ಎಚ್. ಇವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಹಂಪಿ ವಿ. ವಿ. ಕುಲಪತಿ ಡಾ. ಡಿ. ವಿ. ಪರಮಶಿವಮೂರ್ತಿ ತಿಳಿಸಿದರು.
Subscribe to Updates
Get the latest creative news from FooBar about art, design and business.
Previous Articleಮಂಗಳೂರು ಪುರಭವನದಲ್ಲಿ ಸನಾತನ ನೃತ್ಯ ಪ್ರೇರಣ | ಏಪ್ರಿಲ್ 6
Next Article ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’