ಮೂಲ್ಕಿ: ಸಾಹಿತ್ಯ, ಲಲಿತಕಲೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ ಗಣ್ಯರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿದ ನೀಡಲಾಗುವ ಪ್ರತಿಷ್ಠಿತ ‘ದಾಸೋಹಿ’ ಪ್ರಶಸ್ತಿಗೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೈ ದಾನಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಇದರ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕ. ಚು. ಸಾ. ಪ. ಇದರ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
5 ಸೆಪ್ಟೆಂಬರ್ 2024ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿರುವ ಕ. ಚು. ಸಾ. ಪ. ರಾಜ್ಯ ಶಿಕ್ಷಕ ಸಾಹಿತಿಗಳ ಏಳನೆಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡ ಶೆಟ್ರು ತಿಳಿಸಿದ್ದಾರೆ.