ಕೋಟ. : ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಪುಸ್ತಕ ಲೋಕಾರ್ಪಣಾ ಸಮಾರಂಭವು ದಿನಾಂಕ 16 ಅಕ್ಟೋಬರ್ 2025ರಂದು ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ, ಕುಂದಾಪುರದ ಜೆಸ್ಸಿ ಎಲಿಝಬೆತ್ ಜೋಸೆಫ್ ಇವರು ಮಲೆಯಾಳದಿಂದ ಕನ್ನಡಕ್ಕೆ ಅನುವಾದಿಸಿದ ‘ಹೆಂಡತಿ’ ಕಾದಂಬರಿಯನ್ನು ಲೋಕರ್ಪಣೆಗೊಳಿಸಿದ ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಮಾತನಾಡಿ “ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸಬಲ್ಲ ಪ್ರೀತಿಗೆ ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ ಬೆಂಕಿ ಹಬ್ಬುತ್ತಿದೆ. ಜಾತಿ-ಧರ್ಮಗಳ ಹೆಸರಿನಲ್ಲಿ ಕಲಹಗಳು ಮತ್ತು ಹಿಂಸೆ-ರಕ್ತಪಾತಗಳು ಹೆಚ್ಚುತ್ತಿವೆ. ಈ ಸಮಸ್ಯೆಗೆ ಪರಿಹಾರ ನೀಡಲು ಸಾಹಿತ್ಯದಿಂದ ಮಾತ್ರ ಸಾಧ್ಯ. ಇಂದಿನ ಯುವಜನರು ಹೆಚ್ಚು ಹೆಚ್ಚು ಸಾಹಿತ್ಯಾಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬಾವಿಯೊಳಗಿನ ಕಪ್ಪೆಗಳ ಹಾಗಿರದೆ ವಿಶಾಲವಾದ ಪ್ರಪಂಚದ ಬಗ್ಗೆ ತಿಳಿದುಕೊಳ್ಳಲು ಕನ್ನಡ ಸಾಹಿತ್ಯ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಅನುವಾದವಾದ ಸಾಹಿತ್ಯವನ್ನೂ ಓದಿಕೊಳ್ಳುವುದು ಹೆಚ್ಚು ಪ್ರಯೋಜನಕಾರಿ” ಎಂದು ಹೇಳಿದರು.
ಪುಸ್ತಕದ ಲೇಖಕಿ ಜೆಸ್ಸಿ ಎಲಿಝಬೆತ್ ಜೋಸೆಫ್ ಪ್ರಾಸ್ತಾವಿಕವಾಗಿ ತಾನು ಅನುವಾದದಲ್ಲಿ ತೊಡಗಿಕೊಂಡ ಬಗೆಯನ್ನು ವಿವರಿಸಿದರು. ಕೊಟೇಶ್ವರದ ಆಚಾರ್ಯ ನರ್ಸಿಂಗ್ ಹೋಂ ಇಲ್ಲಿನ ವೈದ್ಯಾಧಿಕಾರಿ, ಖ್ಯಾತ ಸಾಹಿತಿ ಮತ್ತು ‘ಸ್ಥಿತಿಗತಿ’ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಆಚಾರ್ಯ “ಪ್ರಪಂಚವನ್ನು ಒಂದಾಗಿಸುವಲ್ಲಿ ಅನುವಾದ ಮತ್ತು ಅನುವಾದಕರ ಮಹತ್ವದ ಕುರಿತು ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಮೇಶ ಆಚಾರ್ ಪುಸ್ತಕದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದರು. ಲೇಖಕಿ ಪಾರ್ವತಿ ಜಿ. ಐತಾಳ್ ಶುಭಾಶಂಸನೆ ಗೈದರು. ಐ. ಕ್ಯೂ. ಎ. ಸಿ. ಮುಖ್ಯಸ್ಥ ಪ್ರೊ. ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಡಾ.ಸೌಮ್ಯಾ ಕಾರ್ಯಕ್ರಮ ನಿರೂಪಿಸಿ, ಇಂಗ್ಲಿಷ್ ಉಪನ್ಯಾಸಕಿ ಸುಷ್ಮಾ ಧನ್ಯವಾದ ಸಮರ್ಪಣೆ ಮಾಡಿದರು.
Subscribe to Updates
Get the latest creative news from FooBar about art, design and business.
Previous Articleಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ