ಪುತ್ತೂರು : ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ರೋಟರಿ ಕ್ಲಬ್ ಪುತ್ತೂರು ಯುವ ಇದರ ಸಹಕಾರದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಸುವರ್ಣ ಸಂಭ್ರಮ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಮಹನೀಯರನ್ನು ನೆನಪಿಸುವ ಸಲುವಾಗಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ರಾಜ್ಯೋತ್ಸವ ಕವಿಗೋಷ್ಠಿಯು ದಿನಾಂಕ 05-11-2023ರ ಆದಿತ್ಯವಾರ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ಪೂರ್ವಾಹ್ನ ಘಂಟೆ 10.00ರಿಂದ ನಡೆಯಲಿದೆ.
ಈ ಕವಿಗೋಷ್ಠಿಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳ ಕವನಗಳನ್ನು ಮಾತ್ರ ವಾಚನ ಅಥವಾ ಗಾಯನ ಮಾಡಲು ಅವಕಾಶವಿದ್ದು, ಗಾಯನದಲ್ಲಿ ಕರೋಕೆ ಉಪಯೋಗಿಸಲು ಅವಕಾಶವಿಲ್ಲ. ಉತ್ತಮ ಗಾಯನ /ವಾಚನ ಮಾಡಿದವರಿಗೆ ಪುಸ್ತಕ ಬಹುಮಾನ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಭಾಗವಹಿಸುವ ಪ್ರತಿಯೊಬ್ಬ ಕವಿಗಳಿಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.
ಆಸಕ್ತ ಗಾಯಕರು/ ವಾಚಕರು ಹೆಸರು ನೋಂದಾಯಿಸಲು ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಸುಪ್ರಿತಾ ಚರಣ್ ಇವರ ದೂರವಾಣಿ ಸಂಖ್ಯೆ 8971271027 ಸಂಪರ್ಕಿಸಬಹುದು.