Subscribe to Updates

    Get the latest creative news from FooBar about art, design and business.

    What's Hot

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನ್ನಡ ಸಾಹಿತ್ಯ ಪರಿಷತ್ತಿನ ಉಳ್ಳಾಲ ತಾಲೂಕು ಘಟಕದಿಂದ ಎಸ್.ವಿ. ಭಟ್ಟರಿಗೆ ಶ್ರದ್ಧಾಂಜಲಿ
    Literature

    ಕನ್ನಡ ಸಾಹಿತ್ಯ ಪರಿಷತ್ತಿನ ಉಳ್ಳಾಲ ತಾಲೂಕು ಘಟಕದಿಂದ ಎಸ್.ವಿ. ಭಟ್ಟರಿಗೆ ಶ್ರದ್ಧಾಂಜಲಿ

    September 16, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಡಿಪು : ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾಗಿದ್ದ ಕಾಸರಗೋಡು ಬೀರಂತಬೈಲು ನಿವಾಸಿ ಎಸ್.ವಿ.ಭಟ್ ಎಂದೇ ಪರಿಚಿತರಾಗಿರುವ ಸುಬ್ರಹ್ಮಣ್ಯ ವೆಂಕಟ್ರಮಣ ಭಟ್ (73) ದಿನಾಂಕ 10-09-2023ರಂದು ನಿಧನ ಹೊಂದಿದರು.

    ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಪರ ಚಟುವಟಿಕೆಗಳನ್ನು ನಿರಂತರ ನಡೆಸುತ್ತಾ ಗ್ರಾಮ ಗ್ರಾಮಗಳಲ್ಲಿ ಕನ್ನಡ ಸಾಹಿತ್ಯದ ಕಾರ್ಯಕ್ರಮಗಳನ್ನು ಸಂಘಟಿಸುತ್ತಾ ಎಸ್.ವಿ. ಭಟ್ಟರು ಕಾಸರಗೋಡು ಕನ್ನಡ ಚಳವಳಿಯನ್ನು ಜೀವಂತವಾಗಿರಿಸಿದ್ದರು. ಎಸ್.ವಿ. ಭಟ್ಟರು ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡು ಘಟಕದ ಅಧ್ಯಕ್ಷರಾಗಿ ಮೂರು ಬಾರಿ ಆಯ್ಕೆಗೊಂಡು ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳವಾದ, ವಿದ್ಯಾರ್ಥಿಸ್ನೇಹಿಯಾದ ಕನ್ನಡ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಎಳೆಯರ ಮನಸ್ಸಿನಲ್ಲಿ ಕನ್ನಡಾಭಿಮಾನವನ್ನು ಬಿತ್ತುವ ಕಾರ್ಯವನ್ನು ಮಾಡಿದ್ದಾರೆ. ಅವರ ಹಠಾತ್ ಅಗಲಿಕೆ ಕಾಸರಗೋಡು ಕನ್ನಡಿಗರಿಗೆ ತುಂಬಲಾರದ ನಷ್ಟ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ.

    ಕಸಾಪ ಉಳ್ಳಾಲ ಘಟಕದ ಕಾರ್ಯದರ್ಶಿಗಳಾದ ರವೀಂದ್ರ ರೈ ಕಲ್ಲಿಮಾರ್, ಎಡ್ವರ್ಡ್ ಲೋಬೋ, ಕೋಶಾಧಿಕಾರಿ ಚಂದ್ರಹಾಸ ರೈ ದೇರಳಕಟ್ಟೆ, ಸಂಘಟನಾ ಕಾರ್ಯದರ್ಶಿಗಳಾದ ತ್ಯಾಗಂ ಹರೇಕಳ, ರಾಧಾಕೃಷ್ಣ ರಾವ್, ಉಳ್ಳಾಲ ಹೋಬಳಿ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಪ್ರಸಾದ್ ರೈ ಮತ್ತಿತರರು ಸಂತಾಪ ಸೂಚಿಸಿ ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ 
    Next Article ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ‘Artspring’ ಚಿತ್ರಕಲಾ ಪ್ರದರ್ಶನ 
    roovari

    Add Comment Cancel Reply


    Related Posts

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026

    ಚರಿತ್ರಾರ್ಹ ದಾಖಲೆಯ ಸಿರಿಬಾಗಿಲ ‘ಬೆಳಕಿನ ಕಿರಣ’ ವಿಚಾರಗೋಷ್ಠಿ

    June 15, 2026

    ಮನೋಹರ ಗ್ರಂಥಮಾಲೆಯ ಅಟ್ಟದಲ್ಲಿ ಮಾತುಕತೆ ಕಾರ್ಯಕ್ರಮ

    June 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.