ಶಿವಮೊಗ್ಗ : ವಸುಧಾ ಕರಣಿಕ್ – ವೈಶಾಲಿ ಭಟ್ ಇವರ ಜನ್ಮದಿನೋತ್ಸವ ನಿಮಿತ್ತ ಸನ್ಮಾನ ಸಮಾರಂಭ ಮತ್ತು ಭರತನಾಟ್ಯ ಪ್ರಸ್ತುತಿಯು ದಿನಾಂಕ 02 ಮಾರ್ಚ್ 2025ರಂದು ಸಂಜೆ 5-00 ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆಯಲಿದೆ.
ಶಿವಮೊಗ್ಗ ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಡಾ. ವಿದುಷಿ ವಸುಂಧರಾ ದೊರೆಸ್ವಾಮಿಯವರ ಶಿಷ್ಯೆ ಮಂಗಳೂರಿನ ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ಎಂಡ್ ಕಲ್ಚರಲ್ ಟ್ರಸ್ಟ್ ಇದರ ನಿರ್ದೇಶಕರಾದ ಡಾ. ವಿದುಷಿ ಭ್ರಮರಿ ಶಿವಪ್ರಕಾಶ್ ಇವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸನ್ಮಾನಿತರು ‘ಕುಮಾರವ್ಯಾಸ ನೃತ್ಯ ಭಾರತ’ ಶಾಸ್ತ್ರೀಯ ನೃತ್ಯ ಪ್ರಸ್ತುತಿ ನೀಡಲಿದ್ದಾರೆ.