Subscribe to Updates

    Get the latest creative news from FooBar about art, design and business.

    What's Hot

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 20, 2026

    ಕೊಂಚಾಡಿಯಲ್ಲಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕಿನಲ್ಲಿ ‘ಹೊಸ ಹೂಂಗು ಕೋಲೆ…’
    Kannada

    ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕಿನಲ್ಲಿ ‘ಹೊಸ ಹೂಂಗು ಕೋಲೆ…’

    August 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕೋಟ : ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕುಂದಾಪ್ರ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಯು-ಚಾನೆಲ್ ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸಾವ ‘ಹೊಸ ಹೂಂಗು ಕೋಲೆ…’ ಕಾರ್ಯಕ್ರಮವು 04 ಆಗಸ್ಟ್ 2024ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕಿನಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಗತಿಪರ ಕೃಷಿಕ ಶ್ರೀ ಜಯರಾಮ್ ಶೆಟ್ಟಿ ಮಾತನಾಡಿ “ಕುಂದಾಪ್ರ ಭಾಷೆ ಕೇವಲ ಮಾತನಾಡುವ ಭಾಷೆಯಾಗಿ ಉಳಿಯದೇ ಜನರ ಭಾವನೆಯ ನಾಡಿಮಿಡಿತವಾಗಿದೆ. ಯಾವುದೇ ಸಂದರ್ಭದಲ್ಲಿ ಹಿಂಜರಿಕೆ ಪಡೆಯದೇ ಕುಂದಾಪ್ರ ಭಾಷೆಯನ್ನು ಬಳಸಬೇಕು. ಇಲ್ಲಿನ ಸಂಸ್ಕೃತಿಯ ವೈವಿಧ್ಯತೆಯ ಅನಾವರಣಕ್ಕೆ ವಿಶ್ವ ಕುಂದಾಪ್ರ ದಿನಚರಣೆ ಸಾಕ್ಷಿಯಾಗುತ್ತಿರುವುದು ಸಂತಸದ ವಿಷಯ.” ಎಂದು ಹೇಳಿದರು.
    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಕೆ. ಸತೀಶ್ ಕುಂದರ್, ಸಾಂಸ್ಕೃತಿಕ ಚಿಂತಕ ಶ್ರೀ ಪ್ರದೀಪ್ ಬಸ್ರೂರು, ಚಿತ್ರಕಲಾ ಶಿಕ್ಷಕ ಶ್ರೀ ಗಿರೀಶ್ ಆಚಾರ್ಯ ವಕ್ವಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಶ್ರೀ ಸತೀಶ್ ವಡ್ಡರ್ಸೆ ನಿರೂಪಿಸಿ, ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಪ್ರಸ್ತಾಪಿಸಿದರು.
    ಸಭಾ ಕಾರ್ಯಕ್ರಮದ ನಂತರ ‘ಗಮ್ಜಾಲ್ ಹರಟೆ’ ತಂಡದವರಿಂದ ಹರಟೆ, ಮಕ್ಕಳಿಂದ ‘ನಮ್ಮ ಕುಂದಾಪ್ರ..ನಮ್ಮ ಸಂಪ್ರದಾಯ’ ದೃಶ್ಯ ಕಥನ ಹಾಗೂ ‘ಕುಂದಾಪ್ರ ಕನ್ನಡ ಕವಿಗೋಷ್ಠಿ’ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯ ಉತ್ಸವ’ | ಆಗಸ್ಟ್ 9, 10 ಮತ್ತು 11
    Next Article ಶ್ರೀ ವಾಗ್ದೇವಿ ಗಮಕ ಕಲಾ ಪ್ರತಿಷ್ಠಾನದಿಂದ ಪ್ರಶಸ್ತಿ ಪ್ರದಾನ
    roovari

    Comments are closed.

    Related Posts

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಕನ್ನಡ ಕಂಪು ಸರಣಿ -9’

    February 19, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.