ಕಾಸರಗೋಡು : ಕಾಸರಗೋಡು ಚಿನ್ಮಯ ವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆಯುವ ‘ಚಿನ್ಮಯ ಫೆಸ್ಟ್’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 07 ಆಗಸ್ಟ್ 2025ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಕೇರಳ ಚಿನ್ಮಯ ಮಿಷನ್ ಇದರ ಮುಖ್ಯಸ್ಥ ಹಾಗೂ ಕಾಸರಗೋಡು ಚಿನ್ಮಯ ವಿದ್ಯಾಲಯದ ಅಧ್ಯಕ್ಷರಾದ ಸ್ವಾಮಿ ವಿವಿಕ್ತಾನಂದ ಸರಸ್ವತಿ ಜೀ. ಮಾತನಾಡಿ “ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು. ಪ್ರತಿಯೊಬ್ಬ ಸ್ಪರ್ಧಿಯೂ ತನ್ನೊಂದಿಗೆ ಮಾತ್ರ ಸ್ಪರ್ಧಿಸಬೇಕು” ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
ಪ್ರಸಿದ್ಧ ಲೇಖಕಿ, ಜನತಾಂತ್ರಿಕ ಕಲಾ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷೆ, ಮಾನವ ಹಕ್ಕುಗಳ ಸಂಘದ ರಾಜ್ಯ ಕಾರ್ಯದರ್ಶಿಯೂ ಆಗಿರುವ ಡಾ. ಎಂ. ವಿ. ಮುಂಥಾಸ್ ಮಾತನಾಡಿ “ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿಹಿಡಿಯುವುದೇ ಕಲೆಯ ಉದ್ದೇಶ” ಎಂದರು.
ವಿದ್ಯಾಲಯದ ಪ್ರಾಂಶುಪಾಲರಾದ ಟಿ. ವಿ. ಸುಕುಮಾರನ್ ವಿದ್ಯಾರ್ಥಿಗಳಿಗೆ ಶುಭಾಶಯವನ್ನು ಕೋರಿದರು. ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಪೂರ್ಣಿಮಾ ಎಸ್. ಆರ್., ಶ್ರೀಮತಿ ಸಿಂಧು ಶಶೀಂದ್ರನ್, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳಾದ ಶೃಕ ಸನತ್ ಕುಮಾರ್ ಸ್ವಾಗತಿಸಿ, ಅನಿರುದ್ಧ್ ರಜಿತ್ ವಂದಿಸಿದರು.