Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಉದ್ಘಾಟನೆಗೊಂಡ “ಕನಸುಗಳು – 2024”
    Drama

    ಪುತ್ತೂರಿನಲ್ಲಿ ಉದ್ಘಾಟನೆಗೊಂಡ “ಕನಸುಗಳು – 2024”

    November 16, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯಮಟ್ಟದ “ಕನಸುಗಳು – 2024” ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 15 ನವೆಂಬರ್ 2024ರಂದು ಕಾಲೇಜಿನ ಅಹಲ್ಯಾಬಾಯಿ ಹೋಳ್ಕರ್‌ ವೇದಿಕೆಯಲ್ಲಿ ನಡೆಯಿತು.


    ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಕಾರ್ಯದರ್ಶಿಗಳಾದ ಡಾ. ಕೆ. ಎಮ್‌. ಕೃಷ್ಣ ಭಟ್‌ ಮಾತನಾಡಿ “ಕನಸು ಒಂದು ಸುಧೀರ್ಘವಾದ ಪಯಣ. ಕನಸುಗಳಿಲ್ಲದ ಬದುಕು ಅಸಾಧ್ಯ. ಕನಸಿನ ಯಾತ್ರೆಗೆ ಒಂದು ಸ್ಪಷ್ಟವಾದ ದಾರಿ ಇರಬೇಕು. ಕ್ರಮಿಸುವ ಹಾದಿಯಲ್ಲಿ ಬದ್ಧತೆಗಳು ಸೇರಿಕೊಂಡಾಗ ಯಾವ ನಿರ್ಧಾರಗಳು ಸಡಿಲವಾಗಲು ಸಾಧ್ಯವಿಲ್ಲ. ಜೀವನದಲ್ಲಿ ಬರುವ ಪ್ರತಿಕೂಲ ಸಮಸ್ಯೆಗಳು ನಮ್ಮನ್ನು ಯಶಸ್ಸಿನಿಂದ ಹಿಮ್ಮೆಟ್ಟಿಸದಿರಲಿ. ಚುಚ್ಚಬಲ್ಲ ಮುಳ್ಳುಗಳನ್ನು ಕೊಡವಿಕೊಂಡು ಮತ್ತೆ ಹೆಜ್ಜೆಗಳನ್ನು ಇಡುವಲ್ಲಿ ದೃಢನಿರ್ಧಾರದ ಅಗತ್ಯವಿದೆ. ವಿದ್ಯಾರ್ಥಿಗಳು ಕಂಡ ಕನಸಿನ ಸಿದ್ಧತೆ ಮೊಳಕೆ ಒಡೆಯುವಂತಹ ಕಾರ್ಯಕ್ರಮ ಇದಾಗಿದೆ.” ಎಂದು ಹೇಳಿದರು.


    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಕೃಷ್ಣಪ್ರಸನ್ನ ಕೆ. ಮಾತನಾಡಿ “ಪ್ರತಿಯೊಬ್ಬನ ಕನಸು ನನಸಾಗಲು ಉತ್ತಮ ಮಾರ್ಗದರ್ಶನ ಅಗತ್ಯ. ಹದಿವಯಸ್ಸಿನ ಮಕ್ಕಳು ಕಾಣುವ ಕನಸುಗಳಿಗೆ ಪೋಷಣೆ ಹಾಗೂ ಉತ್ತೇಜನವನ್ನು ನೀಡುವ ಕಾರ್ಯವನ್ನು ವಿವೇಕಾನಂದ ವಿದ್ಯಾಸಂಸ್ಥೆ ಹಲವು ದಶಕಗಳಿಂದ ಮಾಡುತ್ತಿದೆ.” ಎಂದು ನುಡಿದರು.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ನಿರ್ದೇಶಕ ಮತ್ತು ನಿವೃತ್ತ ಹಿರಿಯ ವಿಜ್ಞಾನಿ ಡಾ. ಕೆ. ಎನ್‌. ಸುಬ್ರಹ್ಮಣ್ಯ ಮಾತನಾಡಿ “ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳಿಗೆ ಸಿಗುವ ವೇದಿಕೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಭವಿಷ್ಯವನ್ನು ಭದ್ರಪಡಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳು ನಮ್ಮಲ್ಲಿನ ಸೃಜನಶೀಲತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತವೆ. ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಸೂಕ್ತ ವೇದಿಕೆಯನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಲಭ್ಯ ಅವಕಾಶಗಳನ್ನು ಬಳಸಿಕೊಂಡು ಯಶಸ್ಸನ್ನು ಸಾಧಿಸುವಂತಾಗಲಿ,” ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವಿವಿಧ ವಿನೋದಾವಳಿಗಳ ಮಳಿಗೆಗಳನ್ನು ಡಾ. ಕೆ. ಎನ್‌ಸುಬ್ರಹ್ಮಣ್ಯ ಉದ್ಘಾಟಿಸಿದರು.


    ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ನಿರ್ದೇಶಕರಾದ ವತ್ಸಲಾ ರಾಜ್ಞಿ, ವಿವೇಕಾನಂದ ವಸತಿ ನಿಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್‌ ಪ್ರಭು, ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ನಿಟಿಲಾಪುರ, ಕನಸುಗಳು ಕಾರ್ಯಕ್ರಮದ ಸಂಯೋಜಕರಾದ ಉಪನ್ಯಾಸಕಿ ದಯಾಮಣಿ ಟಿ. ಕೆ. ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ದೀಕ್ಷಿತಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಯಶವಂತಿ ನಿರೂಪಿಸಿ, ಅನುಪಮಾ ಶೇಟ್‌ ವಂದಿಸಿದರು. ಸಭಾ ಕಾರ್ಯ ಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನ ರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವ ಪತ್ರಕರ್ತ , ದೃಶ್ಯಕಾವ್ಯ, ಯುವ ವಾಣಿಜ್ಯೋದ್ಯಮಿ, ಗಾಳಿಪಟ ಹಾರಾಟ, ಮುಖವರ್ಣಿಕೆ, ವೀಡಿಯೋ ಸಂಕಲನ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleರಂಗರಥದ ಶಿಬಿರಾರ್ಥಿಗಳು ಅಭಿನಯಿಸುವ ‘ನಂಗ್ಯಾಕೊ ಡೌಟು’ ಕನ್ನಡ ನಾಟಕ | ನವೆಂಬರ್ 17
    Next Article ಮಕ್ಕಳ ಕಲಾ ಲೋಕದಿಂದ ‘ಮಕ್ಕಳ ಸಾಹಿತ್ಯ ಸಮ್ಮೇಳನ’ | ನವೆಂಬರ್ 19
    roovari

    Add Comment Cancel Reply


    Related Posts

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಕ.ಸಾ.ಪ.ದಿಂದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ‘ಎದೆಯ ಹಣತೆ’ ಕೃತಿ ಕುರಿತು ಚರ್ಚೆ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.