ಉಡುಪಿ : ಯಕ್ಷಗಾನ ಕೇಂದ್ರ, ಇಂದ್ರಾಳಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದರ ಸಹಯೋಗದಲ್ಲಿ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸನ್ನು ಆರಂಭಿಸಲಾಗುತ್ತಿದ್ದು, ಇದರ ಉದ್ಘಾಟನಾ ಸಮಾರಂಭವನ್ನು ದಿನಾಂಕ 28 ಸೆಪ್ಟೆಂಬರ್ ಆದಿತ್ಯವಾರದಂದು ಮಧ್ಯಾಹ್ನ ಘಂಟೆ 3.00ಕ್ಕೆ ಮಣಿಪಾಲದ Pavillion, MISHA Lake ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆ ಸಹಕುಲಾಧಿಪತಿಗಳಾದ ಡಾ. ಎಚ್. ಎಸ್ ಬಲ್ಲಾಳ್, ಮುಖ್ಯ ಅತಿಥಿಗಳಾಗಿ ಸಹಕುಲಪತಿಗಳಾದ ಡಾ. ನಾರಾಯಣ ಸಭಾಹಿತ್, ಯಕ್ಷಗಾನ ಕೇಂದ್ರದ ಸಲಹಾಸಮಿತಿ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಭಾಗವಹಿಸಲಿದ್ದಾರೆ. ಯಕ್ಷಗಾನ ಕಲಾಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9448868868 / 9845822443 ಸಂಪರ್ಕಿಸಬಹುದು.
Subscribe to Updates
Get the latest creative news from FooBar about art, design and business.
ಯಕ್ಷಗಾನ ಕೇಂದ್ರ, ಇಂದ್ರಾಳಿಯ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಆರಂಭ – ಉದ್ಘಾಟನಾ ಕಾರ್ಯಕ್ರಮ
No Comments1 Min Read