ಮುಲ್ಕಿ : ಮುಲ್ಕಿ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ತು ಇದರ ಉದ್ಘಾಟನೆ, ಸದಸ್ಯತ್ವ ಅಭಿಯಾನ, ಪೂರ್ಣ ಪ್ರಮಾಣದ ಸಮಿತಿ ರಚನೆ ಮತ್ತು ಬ್ಯಾರಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 05 ಜುಲೈ 2026ರಂದು ಹಳೆಯಂಗಡಿ ಸಾಗ್ ಬದ್ರಿಯಾ ಜುಮಾ ಮಸೀದಿಯ ಸಭಾಭವನದಲ್ಲಿ ಜರುಗಲಿದೆ.
ಅಪರಾಹ್ನ ಗಂಟೆ 2-00ಕ್ಕೆ ನಡೆಯವ ಈ ಕಾರ್ಯಕ್ರಮದಲ್ಲಿ ಸಾಗ್ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇ.ಎಂ. ಅಬ್ದುಲ್ಲಾ ಮದನಿ ದುಆ ನೆರವೇರಿಸುವ ಮೂಲಕ ಉದ್ಘಾಟಿಸಲಿದ್ದು, ಪರಿಷತ್ ಅಧ್ಯಕ್ಷ ನಿಸಾರ್ ಅಹ್ಮದ್ ಅಂಗರಗುಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಬ್ಯಾರಿ ಕಲಾ ಕ್ಷೇತ್ರದಲ್ಲಿ ಸಾಧನೆಗೈದ ನೂರ್ ಮುಹಮ್ಮದ್ ಕಾರ್ನಾಡ್ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಮುಹಮ್ಮದ್ ಶಾಫಿ ಮದಾರಿಯವರನ್ನು ಸನ್ಮಾನಿಸಲಾಗುವುದು ಎಂದು ಮುಲ್ಕಿ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ನಿಸಾರ್ ಅಹ್ಮದ್ ಅಂಗರಗುಡ್ಡೆ ತಿಳಿಸಿದ್ದಾರೆ.

