ಕುಂದಾಪುರ : ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ನಡೆಯುವ ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು 29 ಜುಲೈ 2024ರಂದು ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು-ಪಡುಕೆರೆ ಇಲ್ಲಿನ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗೀತಾನಂದ ಪೌಂಡೇಶನ್ ಇದರ ಪ್ರವರ್ತಕರಾದ ಆನಂದ ಕುಂದರ್ ಹಾಗೂ ಇತರ ಅಭ್ಯಾಗತರು ದೀಪ ಪ್ರಜ್ವಲನೆಯೊಂದಿಗೆ ಚೆಂಡೆಯನ್ನು ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮದಾಸ ನಾಯಕ ಇವರು ಯಕ್ಷಗಾನ ಕಲಿಕೆಯಿಂದ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಯಕ್ಷಗಾನ ಕಲಿಕೆಯ ಗುರು ಶ್ರೀ ರಾಘವೇಂದ್ರ ಯಕ್ಷಗಾನದ ಕಲಿಕೆಯ ವಿವಿಧ ಆಯಾಮಗಳ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಜಯರಾಮ್ ಶೆಟ್ಟಿ, ವಾಹಿನಿ ಯುವಕ ಮಂಡಲದ ಅಧ್ಯಕ್ಷರಾದ ರಮೇಶ್ ಕುಂದರ್, ಉಪಸ್ಥಿತರಿದ್ದರು.
ಪ್ರೌಢಶಾಲಾ ಸಹ ಶಿಕ್ಷಕ ಶ್ರೀಧರ ಶಾಸ್ತ್ರೀ ಸ್ವಾಗತಿಸಿ, ಶ್ರೀಧರ ಶಾಸ್ತ್ರೀ ಕಾರ್ಯಕ್ರಮ ನಿರೂಪಿಸಿ, ರಾಜೀವ್ ಸರ್ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಅಧ್ಯಾಪಕ ವೃಂದದವರು, ಎಸ್. ಡಿ. ಎಂ. ಸಿ. ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.