ಹಾರೂಗೇರಿ : ಕನ್ನಡ ಸಾಹಿತ್ಯ ಪರಿಷತ್ತು ರಾಯಬಾಗ ಮತ್ತು ಪ್ರೇರಣ ಸಾಹಿತ್ಯ ಪರಿಷತ್ತು ಇವುಗಳ ವತಿಯಿಂದ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಸಂಗಮೇಶ ನಾಯಿಕರವರ ಚೊಚ್ಚಲ ಕವನ ಸಂಕಲನ ‘ಮೌನ ಮಧುರ’ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 24 ಆಗಸ್ಟ್ 20255ರಂದು ಮುಂಜಾನೆ 10-00 ಗಂಟೆಗೆ ಹಾರೂಗೇರಿ ಎಸ್.ಪಿ.ಎಮ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಕವಿ ಎ.ಎನ್. ರಮೇಶ ಗುಬ್ಬಿ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವನ್ನು ಪ್ರೇರಣ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷರಾದ ಡಾ. ಡಿ. ಪ್ರಾನ್ಸಿಸ್ ಕ್ಸೇವಿಯರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಡಾ. ವಿ.ಎಸ್. ಮಾಳಿ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದು, ಸಹಾಯಕ ಪ್ರಾಧ್ಯಾಪಕರಾದ ಡಾ. ರಮೇಶ ಕಮತಗಿ ಇವರು ಕೃತಿ ಪರಿಚಯ ಮಾಡಲಿದ್ದಾರೆ.