ಕಿನ್ನಿಗೋಳಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಿನ್ನಿಗೋಳಿ ಘಟಕದ ಉದ್ಘಾಟನೆಯನ್ನು ದಿನಾಂಕ 09 ಮೇ 2025ರಂದು ಮಧ್ಯಾಹ್ನ 3-00 ಗಂಟೆಗೆ ಕಿನ್ನಿಗೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಟಪದ ಎದುರು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸಾಧಕ ಕಲಾವಿದರಿಗೆ ಗೌರವಾರ್ಪಣೆ ನೀಡಿ ಸನ್ಮಾನಿಸಲಾಗುವುದು.
ಮಧ್ಯಾಹ್ನ 3-00 ಗಂಟೆಗೆ ರವಿಚಂದ್ರ ಕನ್ನಡಿಕಟ್ಟೆ, ಅಮೃತ ಅಡಿಗ, ಸಿದ್ಧಕಟ್ಟೆ ಭರತ್ ಶೆಟ್ಟಿ, ಡಾ. ಪ್ರಖ್ಯಾತ್ ಶೆಟ್ಟಿ, ಮನ್ವಿತ್ ರೈ ಇರಾ ಇವರಿಂದ ನಡೆಯಲಿರುವ ‘ಯಕ್ಷಗಾನ ಗಾನ ವೈಭವ’ಕ್ಕೆ ಗುರುಪ್ರಸಾದ್ ಬೊಳಿಂಜಡ್ಕ ಮತ್ತು ಕೌಶಿಕ್ ರಾವ್ ಚೆಂಡೆ ಮತ್ತು ಮದ್ದಳೆಯಲ್ಲಿ ಹಾಗೂ ಪೂರ್ಣೇಶ್ ಆಚಾರ್ಯ ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ. ಸಂಜೆ 5-00 ಗಂಟೆಗೆ ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಹೇರಂಭ ಇಂಡಸ್ಟ್ರೀಸ್ ಇದರ ಮಾಲಕರಾದ ಕನ್ಯಾನ ಸದಾಶಿವ ಶೆಟ್ಟಿ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ ಸಭಾ ಕಾರ್ಯಕ್ರಮದ ಬಳಿಕ ಸಂಜೆ 7-00 ಗಂಟೆಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀ ದೇವಿ ಮಹಾತ್ಮ್ಯೆ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ.