ಕುಂದಾಪುರ : ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದ ಆರು ಪ್ರೌಢಶಾಲೆಗಳ ‘ಕಿಶೋರ ಯಕ್ಷಗಾನ ಸಂಭ್ರಮ’ವನ್ನು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ದಿನಾಂಕ 01 ಜನವರಿ 2025ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು.
ಕುಂದಾಪುರ ಶಾಸಕರಾದ ಶ್ರೀ ಕಿರಣ್ಕುಲಮಾರ್ ಕೊಡ್ಗಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಕುಂದಾಪುರ ಉಪವಿಭಾಗ ಅಧಿಕಾರಿಗಳಾದ ಮಹೇಶ್ಚಂದ್ರ ಕೆ., ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಮೋಹನ್ದಾರಸ್ ಶೆಣೈ, ಕುಂದಾಪುರ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಆದರ್ಶ ಹೆಬ್ಬಾರ್, ಕಾವ್ರಡಿ ಸಿಎ ಬ್ಯಾಂಕ್ನದ ಅಧ್ಯಕ್ಷರಾದ ಸದಾನಂದ ಬಳ್ಕೂರು, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಭಾಗವಹಿಸಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಗೈದರು. ಗಣೇಶ್ ಬ್ರಹ್ಮಾವರ ಸಹಕರಿಸಿ, ನಾರಾಯಣ ಎಂ. ಹೆಗಡೆ ಧನ್ಯವಾದ ಸಲ್ಲಿಸಿದರು. ಸಭೆಯ ಪೂರ್ವದಲ್ಲಿ ಸರಕಾರಿ ಪ್ರೌಢಶಾಲೆ ಕೆದೂರು ಇಲ್ಲಿನ ವಿದ್ಯಾರ್ಥಿಗಳಿಂದ ನರಸಿಂಹ ತುಂಗರ ನಿರ್ದೇಶನದಲ್ಲಿ ‘ಲವಣಾಸುರ ಕಾಳಗ’ ಮತ್ತು ಸಭೆಯ ಬಳಿಕ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ದೇವರಾಜದಾಸ ಮರವಂತೆ ಇವರ ನಿರ್ದೇಶನದಲ್ಲಿ ‘ಮೈಂದದ್ವಿವಿದ’ ಯಕ್ಷಗಾನ ಪ್ರದರ್ಶನಗೊಂಡಿತು.