Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ – 2024’ ಉದ್ಘಾಟನೆ
    Yakshagana

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ – 2024’ ಉದ್ಘಾಟನೆ

    December 2, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಗಾನ ಕಲಾರಂಗ (ರಿ.) ಉಡುಪಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ದಿನಾಂಕ 30 ನವೆಂಬರ್ 2024ರಿಂದ 14 ಡಿಸೆಂಬರ್ 2024ರವರೆಗೆ ಉಡುಪಿ ಆಸುಪಾಸಿನ 27 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ‘ಕಿಶೋರ ಯಕ್ಷಗಾನ ಸಂಭ್ರಮ – 2024’ವು ದಿನಾಂಕ 30 ನವೆಂಬರ್ 2024ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಉದ್ಘಾಟನೆಗೊಂಡಿತು.

    ಈ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ “ವಿಶ್ವದಾದ್ಯಂತ ಸಾವಿರಾರು ಮಂದಿ ನಲಿದ, ನರ್ತಿಸಿದ, ಹಾಡಿದ, ಕಲೆಯನ್ನು ಪ್ರದರ್ಶಿಸಿದ ಈ ವೇದಿಕೆಯಲ್ಲಿ ಮಕ್ಕಳು ಕುಣಿದಾಡುವುದು ಕೃಷ್ಣನಿಗೆ ಬಹಳ ಸಂತಸದ ವಿಚಾರ. ಯಕ್ಷಶಿಕ್ಷಣ ಒಂದು ದೇಶಕ್ಕೆ ಮಾದರಿಯಾದಂತಹ ಸಂಸ್ಥೆ. ಈ ಅಭಿಯಾನ ಯಶಸ್ವಿಯಾಗಿ ನಡೆಯಲಿ” ಎಂದು ಹಾರೈಸಿದರು.

    ಅಂಬಲಪಾಡಿ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ, ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್, ಕರ್ನಾಟಕ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಡಿ.ಡಿ.ಪಿ.ಐ. ಕೆ. ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಅಮೆರಿಕಾದ ಪಣಂಬೂರು ವಾಸುದೇವ ಐತಾಳ್, ಯು. ವಿಶ್ವನಾಥ ಶೆಣೈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಕಾರ್ಯದರ್ಶಿ ಮುರಲಿ ಕಡೆಕಾರ್ ನಿರ್ವಹಿಸಿ, ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ಥರಾದ ನಾರಾಯಣ ಎಂ. ಹೆಗಡೆ ಧನ್ಯವಾದ ಸಮರ್ಪಿಸಿದರು. ಸಮಾರಂಭದ ಬಳಿಕ ವಿದ್ಯೋದಯ ಪಬ್ಲಿಕ್ ಸ್ಕೂಲ್ನಿ ವಿದ್ಯಾರ್ಥಿಗಳಿಂದ ನರಸಿಂಹ ತುಂಗರ ನಿರ್ದೇಶನದಲ್ಲಿ ‘ಶಶಿಪ್ರಭಾ ಪರಿಣಯ’ ಯಕ್ಷಗಾನ ಸೊಗಸಾಗಿ ಪ್ರಸ್ತುತಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ವಾಮನ್ ರಾವ್ ಬೇಕಲ್ ಇವರಿಗೆ ಗೌರವ ಡಾಕ್ಟರೇಟ್
    Next Article ಮಡಿಕೇರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ‘ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ’
    roovari

    Add Comment Cancel Reply


    Related Posts

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಸರಯೂ ಸಪ್ತಾಹದಲ್ಲಿ ರೊ. ಜೆ. ವಿ. ಶೆಟ್ಟರಿಗೆ ಸನ್ಮಾನ.

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.