ಶಿವಮೊಗ್ಗ : ಭಾರತದ ಅತಿ ದೊಡ್ಡ ಪುಸ್ತಕ ಭಂಡಾರ ‘ಸಪ್ನ ಬುಕ್ ಹೌಸ್’ ಇದರ 25ನೇ ನೂತನ ಶಾಖೆಯ ಉದ್ಘಾಟನೆ ಸಮಾರಂಭವು ದಿನಾಂಕ 13 ಜೂನ್ 2026ರಂದು ಬೆಳಿಗ್ಗೆ 11-00 ಗಂಟೆಗೆ ಶಿವಮೊಗ್ಗದ ಬಿ.ಹೆಚ್. ರಸ್ತೆ, ಪ್ಯಾರೀಸ್ ಸಿಟಿ ಸೆಂಟರ್ ಮಾಲ್ ಇದರ 2ನೇ ಮಹಡಿಯಲ್ಲಿ ನಡೆಯಲಿದೆ.
ಶ್ರೀ ಆದಿಚುಂಚನಗಿರಿ ಮಠಗಳ ಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮಿಗಳವರು ಇವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಈ ಸಮಾರಂಭದ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಇವರು ವಹಿಸಲಿದ್ದಾರೆ.


