ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ನಡೆಯುವ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭವು ದಿನಾಂಕ 14 ಆಗಸ್ಟ್ 2025ರಂದು ನುಕ್ಕೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಈ ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಎಸ್.ಡಿ.ಎಂ.ಸಿ. ಅಧ್ಯಕ್ಷೆ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಮಹೇಶ್ ಮಂದಾರ್ತಿಯವರ ನಿರ್ದೇಶನದಲ್ಲಿ ವಿದ್ಯಾರ್ಥಿನಿಯರಿಂದ ಪೂರ್ವರಂಗ ಪ್ರದರ್ಶಿಸಲ್ಪಟ್ಟಿತು. ಯಕ್ಷಶಿಕ್ಷಣ ಟ್ರಸ್ಟಿನ ಮುರಲಿ ಕಡೆಕಾರ್ ಮತ್ತು ನಾರಾಯಣ ಎಂ. ಹೆಗಡೆ ಸಮಾರಂಭದಲ್ಲಿ ಭಾಗವಹಿಸಿದರು.