ಮಂಗಳೂರು : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ.) ಮಂಗಳೂರು ವಿಭಾಗ, ವಿದ್ಯಾದಾಯಿನಿ ಹೈಸ್ಕೂಲ್ ಸುರತ್ಕಲ್ ಹಿಂದಿ ವಿಭಾಗ ಇವರ ಸಹಯೋಗದಲ್ಲಿ ಸಂತ ರವಿದಾಸ 650ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಭಾರತೀಯ ಸಂತ ಪರಂಪರೆ ಉಪನ್ಯಾಸ ಮಾಲಿಕೆ -6 ಕಾರ್ಯಕ್ರಮವನ್ನು ದಿನಾಂಕ 2 ಜುಲೈ 2026ರಂದು ಅಪರಾಹ್ನ 2-00 ಗಂಟೆಗೆ ಸುರತ್ಕಲ್ ವಿದ್ಯಾದಾಯಿನಿ ಹೈಸ್ಕೂಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ ಆಚಾರ್ಯ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಸುರತ್ಕಲ್ ವಿದ್ಯಾದಾಯಿನಿ ಹೈಸ್ಕೂಲ್ ಇದರ ಮುಖ್ಯೋಪಾಧ್ಯಾಯರಾದ ದಿವಸ್ಪತಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕರಾದ ಜಿ.ಕೆ. ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಲಿದ್ದಾರೆ.

