Subscribe to Updates

    Get the latest creative news from FooBar about art, design and business.

    What's Hot

    ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪತ್ತನಾಜೆ ತಾಳಮದ್ದಳೆ ಕೂಟ

    May 25, 2026

    ಗಂಟಾಲ್‌ಕಟ್ಟೆಯ ಚರ್ಚ್‌ ಸಭಾಂಗಣದಲ್ಲಿ ಗುಮಟೆ ಕಾರ್ಯಾಗಾರ

    May 25, 2026

    ‘ಒಂದು ಕಥೆ-ಒಂದು ಪ್ರೇರಣೆ’ ಕಥೆ ಹೇಳುವ ಸ್ಪರ್ಧೆ | ಕೊನೆಯ ದಿನಾಂಕ ಮೇ 30

    May 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ. ಸಂಜೀವ ದಂಡಕೇರಿಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ
    Awards

    ಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ. ಸಂಜೀವ ದಂಡಕೇರಿಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    May 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ಮೇ 2026ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ದೀಪ ಬೆಳಗಿ ಉದ್ಘಾಟಿಸಿದರು.

    ಸಮಾರಂಭದಲ್ಲಿ ತುಳು ರಂಗಭೂಮಿ ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ ‘ಬಯ್ಯಮಲ್ಲಿಗೆ’ ಖ್ಯಾತಿಯ ಹಿರಿಯ ನಾಟಕಕಾರ ಡಾ. ಸಂಜೀವ ದಂಡಕೇರಿ ಇವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಂಡಕೇರಿಯವರ ಪತ್ನಿ ಶ್ರೀಮತಿ ಜಲಜಾಕ್ಷಿ ದಂಡಕೇರಿ ಮತ್ತು ಕುಟುಂಬ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡರು.

    ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿದ್ದರು. ಸ್ವಾಗತ ಸಮಿತಿಯ ಡಾ. ಕೆ.ಎನ್. ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಸುಮಾ, ವಿ. ನಾಗೇಂದ್ರ, ಸಂಸ್ಥೆಯ ಮಂಗಳೂರು ಪ್ರತಿನಿಧಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.

    ಆರ್ಯಭಟ ನೃತ್ಯೋತ್ಸವದೊಂದಿಗೆ ಜರಗಿದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 72 ಮಂದಿ ಹಿರಿಯ ಸಾಧಕರಿಗೆ 2025-26ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ. ಎಚ್.ಎಲ್.ಯನ್. ರಾವ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಾರ್ಯದರ್ಶಿ ಡಾ. ಬಸವರಾಜು ವಂದಿಸಿದರು. ಸಾರ್ಥವಳ್ಳಿ ನಾರಾಯಣಸ್ವಾಮಿ ಮತ್ತು ಆರ್. ವೆಂಕಟರಾಜು ಕಾರ್ಯಕ್ರಮ ನಿರೂಪಿಸಿದರು.

    award baikady drama felicitation Literature roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ‘ಶ್ರೀ ಕೃಷ್ಣ ತುಲಾಭಾರ’ ಕಥಾಕೀರ್ತನ
    Next Article ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ಜಿಲ್ಲಾಧ್ಯಕ್ಷರಾಗಿ ಸಾಹಿತಿ ವಾಸು ಸಮುದ್ರವಳ್ಳಿ ಆಯ್ಕೆ
    roovari

    Add Comment Cancel Reply


    Related Posts

    ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪತ್ತನಾಜೆ ತಾಳಮದ್ದಳೆ ಕೂಟ

    May 25, 2026

    ಗಂಟಾಲ್‌ಕಟ್ಟೆಯ ಚರ್ಚ್‌ ಸಭಾಂಗಣದಲ್ಲಿ ಗುಮಟೆ ಕಾರ್ಯಾಗಾರ

    May 25, 2026

    ‘ಒಂದು ಕಥೆ-ಒಂದು ಪ್ರೇರಣೆ’ ಕಥೆ ಹೇಳುವ ಸ್ಪರ್ಧೆ | ಕೊನೆಯ ದಿನಾಂಕ ಮೇ 30

    May 25, 2026

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವೈಷ್ಣವಿ ಜಯಶಂಕರ್ ರಂಗಪ್ರವೇಶ

    May 25, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.