ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ, ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನ ಗಲ್ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಯೋಗದೊಂದಿಗೆ ದಿನಾಂಕ 06 ಸೆಪ್ಟೆಂಬರ್ 2026ರಂದು ಅಂಬಲಪಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಭವಾನಿ ಮಂಟಪದಲ್ಲಿ ನಡೆಯಲಿರುವ ‘ದುಂಡಿ 70’ ಅಭಿನಂದನಾ ಸಮಾರಂಭ ಹಾಗೂ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾಗಿರುವ ಕು.ಗೋ ಇವರು ದಿನಾಂಕ 25 ಆಗಸ್ಟ್ 2026ರಂದು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಏಕವ್ಯಕ್ತಿ ರಂಗ ಪ್ರಯೋಗ, ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ, ಡುಂಡಿರಾಜರ ಪುಸ್ತಕ ಬಿಡುಗಡೆ, ಡುಂಡಿ 70 ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
