ಮಡಿಕೇರಿ : ಕೊಡವ ಮಕ್ಕಡ ಕೂಟದ 100ನೇ ಪುಸ್ತಕಕ್ಕೆ ಬರಹಗಾರರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ನೂರು ಬರಹಗಾರರ ಲೇಖನಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು ಎಂದು ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಇವರು ತಿಳಿಸಿದ್ದಾರೆ.
ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ, ಇತಿಹಾಸ ಸೇರಿದಂತೆ ಸಮಾಜಮುಖಿ ಬರಹಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರ ತರಲು ನಿರ್ಧರಿಸಲಾಗಿದೆ. ಬರಹ ಯಾವ ಭಾಷೆಯಲ್ಲಿ ಬೇಕಾದರೂ ಇರಬಹುದು. ಆಸಕ್ತ ಬರಹಗಾರರು ಯಾವುದೇ ಜಾತಿ, ಮತ, ಬೇಧವಿಲ್ಲದೆ ತಮ್ಮ ಬರಹಗಳನ್ನು ಟೈಪ್ ಮಾಡಿ ಅಥವಾ ಬರೆದು ಕೊಡವ ಮಕ್ಕಡ ಕೂಟ, ಕೆ. ಬಾಡಗ, ಎಫ್.ಎಂ.ಕೆ.ಎಂ.ಸಿ. ಕಾಲೇಜು ಪೋಸ್ಟ್, ಮಡಿಕೇರಿ, ಕೊಡಗು ಈ ವಿಳಾಸಕ್ಕೆ ಕಳುಹಿಸಬಹುದು ಅಥವಾ ಬೊಳ್ಳಜಿರ ಬಿ. ಅಯ್ಯಪ್ಪ 9880778047 ಮೊ. ಸಂಖ್ಯೆಗೆ ವಾಟ್ಸ್ ಅಪ್ ಮಾಡಬಹುದು. ಲೇಖನಗಳನ್ನು ದಿನಾಂಕ 30-06-2024ರೊಳಗೆ ಕಳುಹಿಸಬೇಕು.