ಮಂಗಳೂರು : ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ 2026-27ನೇ ಶೈಕ್ಷಣಿಕ ಸಾಲಿನ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ಸ್ (ಬಿ.ವಿ.ಎ.) ತರಗತಿಗಳ ಪ್ರವೇಶಾತಿಗೆ ದ್ವಿತೀಯ ಪಿ.ಯು.ಸಿ. ಅಥವಾ ಸಮಾನಾಂತರ ಕೋರ್ಸುಗಳಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಜೂನ್ 2026. ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂನ್ 23ರಂದು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ತಿಳಿಸಿದ್ದಾರೆ.
