ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2026ನೇ ಸಾಲಿನಲ್ಲಿ ಕೊಂಕಣಿ ಸಾಹಿತ್ಯ, ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) ಮತ್ತು ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣ ಪತ್ರ. ಫಲತಾಂಬೂಲವನ್ನು ಒಳಗೊಂಡಿದೆ. ಸಾಧಕರು ನೇರವಾಗಿ ಅಥವಾ ಸಂಘ ಸಂಸ್ಥೆಗಳು ಅಥವಾ ಸಾರ್ವಜನಿಕರು ಸಾಧಕರ ಹೆಸರು ಮತ್ತು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2026’ ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕಾ ಕಟ್ಟಡ, ಲಾಲ್ಬಾಗ್, ಮಂಗಳೂರು -575003, ಇವರಿಗೆ ದಿನಾಂಕ 31 ಅಕ್ಟೋಬರ್ 2026ರೊಳಗಾಗಿ ಕಳುಹಿಸಿಕೊಡುವಂತೆ ಕೋರಲಾಗಿದೆ.
