ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2025ನೇ ವರ್ಷದ ಅಕಾಡೆಮಿ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಪ್ರಮುಖರಿಂದ ಅರ್ಜಿ ಆಹ್ವಾನಿಸಿದ್ದು, ತಲಾ ಒಬ್ಬರಂತೆ ಮೂವರು ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿ 2025ಕ್ಕೆ ಆಯ್ಕೆ ಮಾಡಲಾಗುವುದು.
ಅರ್ಜಿಗಳನ್ನು ಸ್ವತ: ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸು ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸುವುದು. ಈ ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 31 ಜನವರಿ 2026 ಕೊನೆಯ ದಿನವಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಗೌರವ ಪ್ರಶಸ್ತಿ 2025’ ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ 571 201, ಮೊಬೈಲ್ ಸಂಖ್ಯೆ 6362522677 ಈ ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಯನ್ನು ಅಕಾಡೆಮಿ ಕಚೇರಿಯಿಂದ ಪಡೆದುಕೊಳ್ಳಬಹುದು. ಈ ಹಿಂದೆ ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದರೂ ಸಹ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಕೋರಿದೆ.
