ಬೆಂಗಳೂರು : ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಆಗ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ ‘ಕನ್ನಡ ಅಣುಗ’ ‘ಕನ್ನಡ ಕಾವ’ ‘ಕನ್ನಡ ಜಾಣ’ ಪರೀಕ್ಷೆಗಳು ಆರಂಭವಾದವು. 1948ರಲ್ಲಿ ‘ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು, 1992ರಲ್ಲಿ ‘ಕನ್ನಡ ಪ್ರವೇಶ’ ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು ನಿರಂತರವಾಗಿ ನಡೆದುಕೊಂಡು ಬರುತ್ತಿದೆ.
ಕನ್ನಡ ಸಾಹಿತ್ಯ ಪರಿಷತ್ತು 2025-26ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2025ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಮೇಲ್ಕಂಡ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2025ರ ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದ್ದು, 2025ರ ಸೆಪ್ಟೆಂಬರ್ 30ರವರೆಗೆ ದಂಡ ಶುಲ್ಕ ರೂ.50-00 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25-೦೦ಗಳ ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ದಿನಾಂಕ 16-07-2025ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಹೆಸರಿಗೆ ಅರವತ್ತೈದು ರೂಪಾಯಿ ಮನಿಯಾರ್ಡರ್ ಮೂಲಕ ಕಳುಹಿಸಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುವುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.
ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು – 560018 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ
ಫೇಸ್ ಬುಕ್ : https://www.facebook.com/kasapaofficial,
https://www.facebook.com/KannadaSahityaParishattu
ಟ್ವಿಟರ್ : https://twitter.com/kannadaparishat
ಕೂ ಆಪ್ : https://www.kooapp.com/profile/kasapa
ಇನ್ ಸ್ಟಾಗ್ರಾಮ್ : https://www.instagram.com/kannadasahityaparishattu
ವೆಬ್ ಸೈಟ್ : https://kannadasahithyaparishattu.in
ದೂರವಾಣಿ ಸಂಖ್ಯೆ : 080-26612991,224238567,26623584
ಇವುಗಳ ಮೂಲಕವೂ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ.