ಬೆಂಗಳೂರು : ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು 2026-27ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ವಿದ್ಯಾಲಯಗಳಲ್ಲಿ ಬಿ.ಎಫ್.ಎ. ಅಥವಾ ಎಂ.ಎಫ್.ಎ. ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಚಿತ್ರಕಲಾ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಆರ್ಥಿಕ ನೆರವನ್ನು ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ನೀಡಲಾಗುತ್ತದೆ. ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದವರಾಗಿರಬೇಕು. ಅರ್ಜಿಯನ್ನು ಕಡ್ಡಾಯವಾಗಿ ಕನ್ನಡದಲ್ಲೇ ಭರ್ತಿ ಮಾಡಬೇಕು. ಅಭ್ಯರ್ಥಿಗಳು ಈ ಹಿಂದೆ ಅಕಾಡೆಮಿಯಿಂದ ಯಾವುದೇ ವಿದ್ಯಾರ್ಥಿ ವೇತನ ಪಡೆದಿಲ್ಲ ಎಂಬುದರ ಕುರಿತು ಸಂಬಂಧಪಟ್ಟ ಕಲಾ ವಿದ್ಯಾಲಯದ ಮುಖ್ಯಸ್ಥರು ಅಥವಾ ಪ್ರಾಚಾರ್ಯರಿಂದ ದೃಢೀಕರಣ ಪತ್ರವನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ಸ್ವ-ವಿವರ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ 30 ಜೂನ್ 2026ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು – 560002 ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22480297, ಇ-ಮೇಲ್ kla.karnatakagmail.com ಹಾಗೂ ವೆಬ್ ಸೈಟ್ https://lalitkala.karnataka.gov.in ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
