ಉಡುಪಿ : ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ಯಕ್ಷಗಾನ ತರಬೇತಿಗಾಗಿ ಸೇರಲು ಬಯಸುವ 7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು 10 ಮೇ 2026 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತರು ದೂರವಾಣಿ ಸಂಖ್ಯೆ 99009 07702 / 99011 90392 / 99452 45144 ಸಂಪರ್ಕಿಸಬಹುದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
