ಉಡುಪಿ : ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಸಂಸ್ಥೆಯ ವತಿಯಿಂದ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪಾನೆಲ್ ಮಾಡುವ ಜೊತೆಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚರಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ದಿನಾಂಕ 12 ಜೂನ್ 2026ರೊಳಗಾಗಿ ವೆಬ್ ಸೈಟ್ www.kannadasiri.karnataka.gov.in ಅರ್ಜಿ ಪಡೆದು, ಅವುಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ.
