ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 16 ನವೆಂಬರ್ 2025ರಂದು ನಡೆಯಲಿದೆ. ಸಮ್ಮೇಳನದ ಅಂಗವಾಗಿ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಹಾಗೂ ಸಾರ್ವಜನಿಕರಿಗೆ ಪ್ರಬಂಧ ಮತ್ತು ಕಥಾ ಸ್ಪರ್ಧೆ ನಡೆಯಲಿದೆ.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ‘ನಾನು ಓದಿದ ಪುಸ್ತಕ’ ಎಂಬ ವಿಷಯದಲ್ಲಿ ‘ಪ್ರಬಂಧ ಹಾಗೂ ಸ್ವರಚಿತ ಕಥೆ’ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಎ4 ಅಳತೆಯ ಕಾಗದದಲ್ಲಿ ಎರಡು ಪುಟಗಳಿಗೆ ಮೀರದಂತೆ ಬರೆದು ದಿನಾಂಕ 02 ನವೆಂಬರ್ 2025ರ ಒಳಗೆ ತಲುಪುವಂತೆ ಕಳುಹಿಸಬೇಕು. ಒಬ್ಬರು ಎರಡೂ ವಿಭಾಗಗಳಲ್ಲಿ ಭಾಗವಹಿಸಬಹುದು. ಪ್ರತಿ ವಿಭಾಗದಲ್ಲಿ ಮೂರು ಬಹುಮಾನಗಳು ಹಾಗೂ ಉತ್ತಮ ಬರಹಗಾರರಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು. ಬರಹಗಳು ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. ಬರಹಗಳನ್ನು ಯೋಗಿಶ್ ಹೊಸೊಳಿಕೆ, ವಳಲಂಬೆ, ಗುತ್ತಿಗಾರು ಗ್ರಾಮ ಮತ್ತು ಅಂಚೆ, ಸುಳ್ಯ ತಾಲೂಕು – 574218, ದೂರವಾಣಿ : 94495 76632 – ಈ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವಂತೆ ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಮತ್ತು ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ತಿಳಿಸಿದ್ದಾರೆ.
