ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ದಿನಾಂಕ 08 ಜೂನ್ 2025ರಂದು ಕಯ್ಯಾರ ಕಿಂಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ -2025 ನಡೆಯಲಿದೆ. ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕವಿಗೋಷ್ಠಿ ಜರುಗಲಿದೆ.
ಈ ಸಂದರ್ಭದಲ್ಲಿ ನಡೆಯುವ ಕಯ್ಯಾರ ಕಾವ್ಯ ಸಂಭ್ರಮ -2025ರಲ್ಲಿ ಕಯ್ಯಾರರ ಕುರಿತ ಸ್ವರಚಿತ ಕವನವಾಚನಕ್ಕೆ ಅವಕಾಶವಿದೆ. ಆಸಕ್ತರು ತಮ್ಮ ಹೆಸರನ್ನು ದಿನಾಂಕ 31 ಮೇ 2025ರ ಮೊದಲು ನೋಂದಾಯಿಸಬೇಕು ಎಂದು ಕಾಸರಗೋಡು ಜಿಲ್ಲಾ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿರಾಜ್ ಅಡೂರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗೆ 9447490344 ಸಂಖ್ಯೆಯನ್ನು ಸಂಪರ್ಕಿಸಿರಿ.