ಕಾರ್ಕಳ : ಕಳೆದ ನಲುವತ್ತೆಂಟು ವರುಷಗಳಿಂದ ‘ಮುದ್ದಣ ಕಾವ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2026ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘ [email protected] ಎನ್ನುವ ಮೈಲ್ ಐಡಿ ಮೂಲಕ ಪಡೆದುಕೊಳ್ಳಬಹುದು. ಇಲ್ಲವೇ ಅಧ್ಯಕ್ಷರನ್ನು : 9900701666 ಅಥವಾ ಪ್ರಧಾನ ಕಾರ್ಯದರ್ಶಿಯವರನ್ನು : 9008978366 ದೂರವಾಣಿಯಲ್ಲಿ ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ 15 ಸೆಪ್ಟೆಂಬರ್ 2026 ಆಗಿದ್ದು, ಪ್ರಶಸ್ತಿ ಘೋಷಣೆ ದಿನಾಂಕ 01 ನವಂಬರ 2026 ಆಗಿರುತ್ತದೆ ಎಂದು ಕನ್ನಡ ಸಂಘ ತಿಳಿಸಿದೆ.
