ಉಡುಪಿ : ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯ ವತಿಯಿಂದ ನೀಡಲಾಗುವ, ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗಾಗಿ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ.
2025ನೇ ಸಾಲಿನಲ್ಲಿ ಪ್ರಕಟಗೊಂಡ ಮೊದಲ ಆವೃತ್ತಿಯ ಸ್ವರಚಿತ ಹಾಗೂ ಸ್ವತಂತ್ರ ಕವನ ಸಂಕಲನಗಳನ್ನು ಮಾತ್ರ ಈ ಪ್ರಶಸ್ತಿಗಾಗಿ ಪರಿಗಣಿಸಲಾಗುವುದು. ಪ್ರಶಸ್ತಿಯು ರೂ.10,000/- ನಗದು ಗೌರವ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಪ್ರಶಸ್ತಿಗೆ ಕಳುಹಿಸುವ ಕೃತಿಗಳು ಸ್ವತಂತ್ರ ಕವನ ಸಂಕಲನಗಳಾಗಿರಬೇಕು. ಯಾವುದೇ ರೀತಿಯ ಅನುವಾದಿತ ಕೃತಿಗಳು, ರೂಪಾಂತರ, ಶಿಶುಪ್ರಾಸ ಹಾಗೂ ಹನಿಗವನಗಳ ಸಂಕಲನಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ ಎಂದು ಪ್ರಶಸ್ತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ತಿಳಿಸಿದ್ದಾರೆ.
