ಬೆಂಗಳೂರು : ಉತ್ಥಾನ ಮಾಸಪತ್ರಿಕೆಯು ಕಳೆದ ಐದು ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆ ಆಯೋಜಿಸುತ್ತಿದ್ದು, ಈ ಬಾರಿ 2025ನೇ ಸಾಲಿನ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಕಥೆಯು 3000 ಪದಗಳ ಮಿತಿಯಲ್ಲಿರಬೇಕು. ಕಥೆಗಳು ಸ್ವತಂತ್ರವಾಗಿರಬೇಕು ಮತ್ತು ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆಯನ್ನು ಅಂಚೆ ಮೂಲಕ ಅಥವಾ ನುಡಿ ಇಲ್ಲವೇ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ದಪಡಿಸಿ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ. ಕಥೆಗಳು ತಲುಪಲು ಅಕ್ಟೋಬರ್ 10 ಕೊನೆಯ ದಿನವಾಗಿದ್ದು, ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು. ಕಥೆಗಳನ್ನು ಇ-ಮೇಲ್ : [email protected] ಅಥವಾ ಸಂಪಾದಕರು, ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ -2025, ಕೇಶವ ಶಿಲ್ಪ, ಕೆಂಪೇಗೌಡನಗರ, ಬೆಂಗಳೂರು -04 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 7795441894 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.