ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಹಕಾರದಲ್ಲಿ, ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬೇಕಲ ರಾಮ ನಾಯಕರವರ ಬದುಕು – ಬರಹದ ಕುರಿತ ಸ್ಮರಣಾಂಜಲಿ ಕಾರ್ಯಕ್ರಮವು ದಿನಾಂಕ 27 ಏಪ್ರಿಲ್ 2025ರಂದು ಅಪರಾಹ್ನ 2-00 ಗಂಟೆಗೆ ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ನಡೆಯುವ ವಸಂತ ಚುಟುಕು ಕವಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲೆಯ ಆಸಕ್ತ ಕವಿಗಳಿಗೆ ಚುಟುಕುಗಳನ್ನು ವಾಚಿಸಲು ಅವಕಾಶವಿದೆ. ಚುಟುಕು ಕವನಕ್ಕೆ ವಿಷಯ ನಿರ್ಬಂಧವಿಲ್ಲ. ಒಬ್ಬರು ನಾಲ್ಕು ಸಾಲಿನ ಉತ್ತಮ ಎನಿಸುವ ಮೂರು ಚುಟುಕುಗಳನ್ನು ವಾಚಿಸಬಹುದು. ಆಸಕ್ತರು ದಿನಾಂಕ 20 ಏಪ್ರಿಲ್ 2025ರ ಮೊದಲು 9447490344 ಸಂಖ್ಯೆಗೆ ವಾಟ್ಸಪ್ ಮೂಲಕ ತಮ್ಮ ಭಾಗವಹಿಸುವಿಕೆಯನ್ನು ತಿಳಿಸಬೇಕೆಂದು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ತಿಳಿಸಿದ್ದಾರೆ.