ಮಂಗಳೂರು : ಮುಸ್ಲಿಂ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಂ ಬರಹಗಾರರ ಅತ್ಯುತ್ತಮ ಕನ್ನಡ ಕೃತಿಗೆ ರಾಜ್ಯಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ ನೀಡುತ್ತಾ ಬಂದಿದ್ದು, 2025ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದೆ.
ಆಸಕ್ತ ಮುಸ್ಲಿಂ ಬರಹಗಾರರು ತಮ್ಮ ಕನ್ನಡದಲ್ಲಿ ಪ್ರಕಟಿತ 2025ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ದಿನಾಂಕ 10 ಅಕ್ಟೋಬರ್ 2026ರೊಳಗಾಗಿ ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು-575001 (ದೂ. ಸಂ. 98450 54191, 0824 2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ. ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.
