ಬಂಟ್ವಾಳ : ಬಂಟ್ವಾಳ ತಾಲೂಕು ಕುಕ್ಕಾಜೆ ಶ್ರೀ ನರಸಿಂಹ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಬಾಬ್ತು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಯಕ್ಷಗಾನ ತಾಳಮದ್ದಳೆ ‘ಜಾಂಬವತಿ ಕಲ್ಯಾಣ’ ಪ್ರಸಂಗವು ದಿನಾಂಕ 18 ಡಿಸೆಂಬರ್ 2024ರಂದು ಶ್ರೀ ದೇವಳದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ರವರ ಸ೦ಯೋಜನೆಯಲ್ಲಿ ನಡೆಯಿತು.
ಹಿಮ್ಮೇಳದಲ್ಲಿ ಆನಂದ ಸವಣೂರು, ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀ ಕೃಷ್ಣ), ಭಾಸ್ಕರ್ ಶೆಟ್ಟಿ ಸಾಲ್ಮರ (ಬಲರಾಮ), ಗುಂಡ್ಯಡ್ಕ ಈಶ್ವರ ಭಟ್ (ಜಾಂಬವ) ಸಹಕರಿಸಿದರು. ಕಯ್ಯೂರು ನಾರಾಯಣ ಭಟ್ ಸ್ವಾಗತಿಸಿ ವಂದಿಸಿದರು.