ಸುಳ್ಯ : ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಆಶ್ರಯದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಜನಪದ ಸಾಂಸ್ಕೃತಿಕ ವೈಭವ ನಲಿಪು- 2023, ಜನಪದ ಪ್ರಕಾರಗಳ ಮುಕ್ತ ನೃತ್ಯ ಸ್ಪರ್ಧೆ ಕಾರ್ಯಕ್ರಮವು ದಿನಾಂಕ 02-09-2023ರ ಶನಿವಾರ ಜರಗಿತು.
ಈ ಕಾರ್ಯಕ್ರಮವನ್ನು ಮಾಜಿ ಸಚಿವ ಎಸ್. ಅಂಗಾರ ಉದ್ಘಾಟಿಸಿ ಮಾತನಾಡುತ್ತಾ “ಜನಪದ ಸಾಹಿತ್ಯ, ಕಲೆ, ಸಂಸ್ಕೃತಿ ಜೀವಂತವಾಗಿ ಉಳಿಯಬೇಕಾದರೆ ಸರಕಾರವು ಯುವಜನ ಸಂಯುಕ್ತ ಮಂಡಳಿಗಳಿಗೆ ಪ್ರೋತ್ಸಾಹ ನೀಡಬೇಕು. ಸುಳ್ಯದಲ್ಲಿ ರಾಜ್ಯ ಮಟ್ಟದ ಯುವಜನ ಮೇಳವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಸುಬ್ರಾಯ ಚೊಕ್ಕಾಡಿಯವರಂತಹ ಓರ್ವ ಖ್ಯಾತ ಕವಿಯನ್ನು ಸಾರಸ್ವತ ಕ್ಷೇತ್ರಕ್ಕೆ ಕೊಡುಗೆ ನೀಡಿರುವುದು ಚೊಕ್ಕಾಡಿ ಎಂಬ ಗ್ರಾಮೀಣ ಪ್ರದೇಶ” ಎಂದು ಅವರು ಉಲ್ಲೇಖಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಮರಮುಡ್ನೂರು
ಪಂಚಾಯತ್ ಅಧ್ಯಕ್ಷೆ ಜಾನಕಿ ಕಂದಡ್ಕ, ಬೆಳ್ಳಾರೆ ಕಾಮಧೇನು ಗ್ರೂಪ್ಸ್ ಮಾಲಕ ಮಾಧವ ಗೌಡ ಬೆಳ್ಳಾರೆ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ, ರಾಜ್ಯ ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಕರ್ಮಾಜೆ, ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಪೈಲಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಜಯಶಿವ ಮಡಪ್ಪಾಡಿ, ಯುವ ಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಶಿವಪ್ರಕಾಶ್ ಕಡಪಳ, ಚೊಕ್ಕಾಡಿ ಗರುಡ ಯುವಕ ಮಂಡಲದ ಅಧ್ಯಕ್ಷ ಮನೋಜ್ ಪಡ್ಪು ಇವರುಗಳು ಭಾಗವಹಿಸಿದ್ದರು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ತೇಜಸ್ವಿ ಕಡಪಳ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿ, ಪೈಲಾರು ಮಿತ್ರ ವೃಂದದ ಅಧ್ಯಕ್ಷ ಶಶಿಕಾಂತ್ ಮಿತ್ತೂರು ನಿರೂಪಿಸಿದರು. ಯುವಜನ ಸಂಯುಕ್ತ ಮಂಡಳಿ ಸದಸ್ಯರು ಸಹಕರಿಸಿದರು.