ಉಡುಪಿ: ಶ್ರೀ ಕಾನಂಗಿ ಮಹಾಲಿಂಗೇಶ್ವರ ದೇವಸ್ಥಾನ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಉಡುಪಿ ಇದರ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ‘ಜಾನಪದದಲ್ಲಿ ಭಜನೆ’ ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 04-06-2023ರ ರವಿವಾರ ಬೆಳಿಗ್ಗೆ ಉಡುಪಿಯ ಕಡೆಕಾರಿನ ಶ್ರೀ ಕಾನಂಗಿ ಮಹಾಲಿಂಗೇಶ್ವರ ( ಬ್ರಹ್ಮ-ವಿಷ್ಣು- ಮಹೇಶ್ವರ ) ದೇವಸ್ಥಾನ ಕುತ್ಪಾಡಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಅಂಬಲಪಾಡಿಯ ಶ್ರೀ ಮಹಾಕಾಳಿ ಜನಾರ್ದನ ದೇವಸ್ಥಾನದ ಧರ್ಮದರ್ಶಿಗಳಾದ ಡಾ.ನಿ.ಬಿ. ವಿಜಯ ಬಲ್ಲಾಳ್ ಉದ್ಘಾಟಿಸಲಿದ್ದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ. ತುಕರಾಮ ಪೂಜಾರಿ ಹಾಗೂ ಉಡುಪಿಯ ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯದರ್ಶಿಯಾದ ಶ್ರೀ ರವಿರಾಜ ನಾಯಕ್ ವಿಶೇಷ ಉಪನ್ಯಾಸ ನೀಡಲಿದ್ದು ಶ್ರೀ ಕಾನಂಗಿ ಮಹಾಲಿಂಗೇಶ್ವರ ( ಬ್ರಹ್ಮ-ವಿಷ್ಣು- ಮಹೇಶ್ವರ ) ದೇವಸ್ಥಾನದ ಧರ್ಮದರ್ಶಿಗಳಾದ ಡಾ.ಕೆ.ಆರ್.ಕೆ.ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕಡೆಕಾರಿನ ಹಿರಿಯ ಭಜಕರಾದ ಶ್ರೀ ಶ್ರೀನಿವಾಸ ಹೆಗ್ಡೆ ಇವರನ್ನು ಸನ್ಮಾನಿಸಲಾಗುವುದು.

